ರಾಜ್ಯದ ವಿಶೇಷ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಶಿಕ್ಷಕರಿಗೆ, ಸಹಾಯಕ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆ.5ರ ಶಿಕ್ಷಕರ ದಿನಾಚರಣೆಯ ಕರಾಳ ದಿನವನ್ನಾಗಿ ಆಚರಿಸಲು ರಾಜ್ಯ ವಿಶೇಷ ಶಿಕ್ಷಕೇತರ ಸಂಘ ನಿರ್ಧರಿಸಿದೆ.
ರಾಜ್ಯಾದ್ಯಂತ ಆಗಮಿಸಲಿರುವ ಸುಮಾರು 800ಕ್ಕೂ ಹೆಚ್ಚು ಮಂದಿ ವಿಶೇಷ ಶಿಕ್ಷಕರು, ಸಹಾಯಕ ಶಿಕ್ಷಕರು ಟೌನ್‌ಹಾಲ್ ಮುಂದೆ ಬೆಳಿಗ್ಗೆ 9ರಿಂದ ಮಧ್ಯಾಹ್ನದವರೆಗೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವಸಂತ್ ಕುಮಾರ್ ಶೆಟ್ಟಿ ಹಾಗೂ ಅಧ್ಯಕ್ಷೆ ಉಷಾ ಜಹಂಗಿರ್‌ದಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯ ಸರ್ಕಾರ ವಿಶೇಷ ಶಿಕ್ಷಣ ಸಂಸ್ಥೆಗಳನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದ ಅವರು ಬೆರಳೆಣಿಕೆಯಷ್ಟು ಸಂಸ್ಥೆಗಳಿಗೆ ಅನುದಾನ ನೀಡಿ ಬಹುತೇಕ ಸಂಸ್ಥೆಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ದೂರಿದರು.
ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗ್ಡೆ ಕಾಗೇರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ನರೇಂದ್ರ ಸ್ವಾಮಿಯವರುಗಳು ಈ ಯೋಜನೆ ಕೇಂದ್ರ ಸರ್ಕಾರದ್ದು, ರಾಜ್ಯ ಸರ್ಕಾರಕ್ಕೆ ಸಂಬಂಧಿಸಿಲ್ಲ ಎಂದು ಹಾರಿಕೆ ಉತ್ತರ ನೀಡಿದ್ದಾರೆ. ಇದನ್ನು ಪ್ರತಿಭಟನೆ ಮುಷ್ಕರ ನಡೆಸುತ್ತಿರುವುದಾಗಿ ಅವರು ಹೇಳಿದರು.