ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಂದು-ಹೋಗಲು ಕೋರ್ಟ್ ಮಾವನ ಮನೆ ಅಲ್ಲ! (High court | Police | Bangalore | ZP)
 
NRB
ನಗರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಪ್ರಶ್ನಿಸಿ ಸದಸ್ಯ ಜಿ.ನಾಗರಾಜ್ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆಯಬೇಕೆಂಬ ಕೋರಿಕೆಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಅರ್ಜಿ ಸಲ್ಲಿಸಿದ ನಂತರ ಯಾವುದೋ ವೈಯಕ್ತಿಕ ಉದ್ದೇಶಗಳಿಗೆ ಅದನ್ನು ವಾಪಸ್ ಪಡೆಯಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾ.ವಿ.ಗೋಪಾಲಗೌಡ ಮತ್ತು ನ್ಯಾ.ಡಾ.ಕೆ.ಭಕ್ತವತ್ಸಲ ಅವರಿದ್ದ ವಿಭಾಗೀಯ ಪೀಠ, ಅರ್ಜಿ ವಾಪಸ್ ಪಡೆಯಲು ಮುಂದಾದ ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದೆ.

'ಬೇಕೆಂದಾಗ ಬಂದು ಹೋಗಲು ಇದೇನು ಮಾವನ ಮನೆ ಅಲ್ಲ. ಹೈಕೋರ್ಟ್‌ಗೆ ತನ್ನದೇ ಆದ ಘನತೆ, ಗೌರವ ಇದೆ. ಯಾರದೋ ವೈಯಕ್ತಿಕ ಉದ್ದೇಶಗಳನ್ನು ಬಗೆಹರಿಸಿಕೊಳ್ಳಲು ಇಲ್ಲಿ ಅವಕಾಶವಿಲ್ಲ' ಎಂದು ನ್ಯಾಯಪೀಠ ಹೇಳಿದೆ.

ಅರ್ಜಿ ವಾಪಸ್ ಪಡೆದರೆ ಭಾರೀ ಮೊತ್ತದ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿರುವ ನ್ಯಾಯಪೀಠ, ಅರ್ಜಿದಾರರ ಪರ ವಕೀಲರಿಗೆ ವಾದ ಮುಂದುವರಿಸಲು ಸೂಚಿಸಿತು. ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ನಿಗದಿಪಡಿಸಲಾಯಿತು.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ