ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕನಿಷ್ಠ ತಲಾ 10ಮನೆಗಳ ನಿರ್ಮಾಣಕ್ಕೆ ಶಾಸಕರಿಗೆ ಸೂಚನೆ (Flood | House Construction | MLA | C.T. Ravi)
Feedback Print Bookmark and Share
 
ಉತ್ತರ ಕರ್ನಾಟಕದ ಪೀಡಿತ ಪ್ರದೇಶಗಳಲ್ಲಿ ಸ್ಥಳೀಯ ಶಾಸಕರು ಮಾತ್ರವಲ್ಲದೇ ಇತರ ಶಾಸಕರು ಕೂಡ ಕನಿಷ್ಠ ತಲಾ 10 ಮನೆಗಳನ್ನು ಕಟ್ಟಿಸಿಕೊಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎಲ್ಲ ಶಾಸಕರಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಭಾನುವಾರ ನಡೆದ ಸಭೆಯ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಬಿಜೆಪಿ ವಕ್ತಾರ ಸಿ.ಟಿ.ರವಿ ಅವರು ಈ ವಿಷಯ ತಿಳಿಸಿದ್ದಾರೆ.

"ತಮ್ಮ ವ್ಯಾಪ್ತಿಯಲ್ಲಿ ಉಂಟಾಗಿರುವ ನಷ್ಟಗಳ ಕುರಿತು ವರದಿ ಸಲ್ಲಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಮುಖ್ಯಮಂತ್ರಿಗಳು ಸ್ಥಳಕ್ಕೆ ಭೇಟಿ ನೀಡಿ ಅಹವಾಲು ಆಲಿಸಲಿದ್ದಾರೆ, ಆಯಾ ಜಿಲ್ಲಾಧಿಕಾರಿಗಳು, ತಾಲ್ಲೂಕು ಅಧಿಕಾರಿಗಳ ಜೊತೆ ಸಂತ್ರಸ್ತರ ಸಮಸ್ಯೆಗಳನ್ನು ಕೇಳಲಾಗುವುದು. ಸ್ಥಳದಲ್ಲಿಯೇ ಅವರ ಸಮಸ್ಯೆ ಬಗೆಹರಿಸಲು ಸರ್ವ ರೀತಿಯಲ್ಲಿ ಪ್ರಯತ್ನಿಸಲಾಗುವುದು. ಈ ನಿಟ್ಟಿನಲ್ಲಿ ಯಾವ ರೀತಿಯಲ್ಲಿ ಕೆಲಸ ಮಾಡಬಹುದು ಎಂಬ ಬಗ್ಗೆ ಸಂಸದರು ಸಭೆಯಲ್ಲಿ ಸಲಹೆ ನೀಡಿದ್ದಾರೆ" ಎಂದು ಅವರು ತಿಳಿಸಿದರು.

ಸಂತ್ರಸ್ತರ ರಕ್ಷಣೆ, ಪರಿಹಾರ ಹಾಗೂ ಪುನರ್ವಸತಿ ಈ ಮೂರು ಹಂತಗಳಲ್ಲಿ ಪರಿಹಾರ ಕಾರ್ಯಗಳನ್ನು ನಡೆಸಲು ತೀರ್ಮಾನಿಸಲಾಗಿದ್ದು, ಪ್ರಕೃತಿ ವಿಕೋಪ ಪರಿಹಾರ ನಿಧಿ ನಿಯಮಗಳ ಪ್ರಕಾರ ಪರಿಹಾರ ನೀಡುವ ಕಾರ್ಯ ಸಾಗಲಿದೆ ಎಂದವರು ತಿಳಿಸಿದ್ದಾರೆ.

ನೆಮಸಮಗೊಂಡಿರುವ ಕಚ್ಚಾಮನೆಗಳಿಗೆ ಏಳು ಸಾವಿರ ರೂಪಾಯಿ, ಪಕ್ಕಾ ಮನೆಗಳಿಗೆ 35ರಿಂದ 50ಸಾವಿರ ರೂಪಾಯಿ ನೀಡಲಾಗುವುದು. ಮನೆ ಕಳೆದುಕೊಂಡವರಿಗೆ 30 ಬೈ 50 ನಿವೇಶನ ನೀಡಲಾಗುವುದು. ಇನ್ನೂ ಹೆಚ್ಚಿನ ನಿವೇಶನ ಇಚ್ಛಿಸುವವರು ಹಣ ಕೊಟ್ಟು ಪಡೆದುಕೊಳ್ಳಬಹುದು ಎಂದು ಅವರು ವಿವರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ