ಹಲವು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಅಟ್ಟಹಾಸ ಮಾಡುತ್ತಿದ್ದ ಭೂಗತ ಪಾತಕಿ ಬನ್ನಂಜೆ ರಾಜ ದುಬೈ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತನ ವಿರುದ್ಧ ಇಂಟರ್ಪೊಲ್ ನೋಟಿಸ್ ಜಾರಿಯಾಗಿತ್ತು.
ಮಂಗಳೂರು ಮೂಲದ ಈತ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದಾನೆ. 1998ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಈತ ಬಳಿಕ ದುಬೈಗೆ ಪರಾರಿಯಾಗಿದ್ದ. ಮುತ್ತಪ್ಪ ರೈ ಗ್ಯಾಂಗಿನಲ್ಲಿ ಗುರುತಿಸಿಕೊಂಡಿದ್ದ ಈತ 18 ಪ್ರಕರಣಗಳಲ್ಲಿ ರಾಜ್ಯ ಪೊಲೀಸರಿಗೆ ಬೇಕಾಗಿದ್ದಾನೆ.
ಈತನನ್ನು ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಗಾಗಿ ರಾಜ್ಯ ಪೊಲೀಸರು ದುಬೈ ಪೊಲೀಸರೊಂದಿಗೆ ಸಂಪರ್ಕ ಸಾಧಿಸಿದ್ದು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈತನ ವಿರುದ್ಧ ಸಿಬಿಐನಲ್ಲೂ ಪ್ರಕರಣ ದಾಖಲಿಸಲಾಗಿದೆ.