ಎಚ್ಎಎಲ್ ಕಾರ್ಖಾನೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಇದರಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಮತ್ತು ಮಾಜಿ ಸಚಿವೆ ಬಿ.ಟಿ. ಲಲಿತಾನಾಯಕ್ ಆಗ್ರಹಿಸಿದ್ದಾರೆ.
ನಗರದಲ್ಲಿ ಇಂದು ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಚ್ಎಎಲ್ ಕಾರ್ಖಾನೆಯಲ್ಲಿ ಹಲವು ವಿಭಾಗಗಳಿಗೆ ನೇಮಕಾತಿ ಆರಂಭವಾಗಿದೆ. ಆದರೆ ಈ ಹುದ್ದೆಗಳಿಗೆ ಉತ್ತರ ಭಾರತೀಯರನ್ನೇ ಹೆಚ್ಚಾಗಿ ನೇಮಕ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಎಚ್ಎಎಲ್ನಲ್ಲಿ ದೇಶದ ಯಾವುದೇ ಭಾಗದವರನ್ನು ಉದ್ಯೌಗಕ್ಕೆ ನೇಮಿಸಿಕೊಳ್ಳುವ ಹಕ್ಕು ಕೇಂದ್ರ ಸಂಸ್ಥೆಗಿದೆ. ಆದರೆ ಸ್ಥಳೀಯರಿಗೆ ಮೀಸಲಾತಿ ನೀಡಬೇಕೆಂದು ಸರೋಜಿನಿ ಮಹಿಷಿ ಅವರ ವರದಿಯನ್ನು ಕಾರ್ಖಾನೆ ಗಾಳಿಗೆ ತೂರಿದೆ ಎಂದು ಅವರು ಆಕ್ರೌಶ ವ್ಯಕ್ತಪಡಿಸಿದರು.
ಅಲ್ಲದೆ, ಎಚ್ಎಎಲ್ಗೆ ಉತ್ತರ ಭಾರತದವರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಹುನ್ನಾರವೂ ನಡೆದಿದೆ. ಅದು ಸರಿಯಲ್ಲ. ಕನ್ನಡಿಗರೇ ಅಧ್ಯಕ್ಷರಾಗಬೇಕೆಂದು ಎಚ್.ಎಸ್. ದೊರೆಸ್ವಾಮಿ ಒತ್ತಾಯಿಸಿದ್ದಾರೆ.