ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸುಂಕದ 'ಸಂಕಟ'ಕ್ಕೆ ಲಾರಿ ಮಾಲೀಕರ ವಿರೋಧ (Lorry Owners | Flood | Tax | Petrol)
Feedback Print Bookmark and Share
 
ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕು ಸಾಗಣೆ ಲಾರಿಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುವ ಸರ್ಕಾರದ ಕ್ರಮವನ್ನು ಖಂಡಿಸಿರುವ ಲಾರಿ ಮಾಲೀಕರು ಈ ಕ್ರಮವನ್ನು ವಾಪಾಸ್ ತೆಗೆದುಕೊಳ್ಳದಿದ್ದರೆ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಹೂಡುವುದಾಗಿ ಬೆದರಿಕೆ ಒಡ್ಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ, ಯಾವುದೇ ಕಾರಣಕ್ಕೂ ಸರಕು ಸಾಗಣೆ ಲಾರಿಗಳ ಮೇಲೆ ಹೆಚ್ಚಿನ ಸುಂಕ ವಿಧಿಸಬಾರದು ಎಂದು ಆಗ್ರಹಿಸಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರಕ್ಕೆ ತೆರಿಗೆ ಪಾವತಿಸುತ್ತಿದ್ದೇವೆ. ಹೀಗಿದ್ದು, ಹೆಚ್ಚುವರಿ ಸುಂಕ ವಿಧಿಸಲು ಮುಂದಾದರೆ ಸರ್ಕಾರವೇ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ನೆರೆ ಪೀಡಿತ ಸಂತ್ರಸ್ತರಿಗೆ ನಾವು ಕೂಡ ಸ್ಪಂದಿಸಿದ್ದೇವೆ. ಈಗಾಗಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಾಕಷ್ಟು ನೆರವಿನ ಸಾಮಗ್ರಿಗಳನ್ನು ಕೊಂಡೊಯ್ದು ಸಂತ್ರಸ್ತರಿಗೆ ನೀಡಿದ್ದೇವೆ. ಸಂತ್ರಸ್ತರ ನೆರವಿಗಾಗಿ ಸಹಾಯ ಹಸ್ತ ಚಾಚುವ ದಾನಿಗಳ ಪರಿಹಾರ ಸಾಮಗ್ರಿಗಳನ್ನು ಲಾರಿಗಳ ಮೂಲಕ ಉಚಿತವಾಗಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಾಗಿಸಿದ್ದೇವೆ. ಇಷ್ಟೆಲ್ಲಾ ಸಹಕಾರ ನೀಡಿದ್ದಾಗ್ಯೂ ಹೆಚ್ಚುವರಿ ಸುಂಕದ ಅಗತ್ಯವೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದಾಗಿ ಲಾರಿ ಮಾಲೀಕರು ತೀವ್ರ ಸಂಕಷ್ಟದಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಲಾರಿ ಮಾಲೀಕರು ಮತ್ತು ಕಾರ್ಮಿಕರ ಬದುಕು ದುಸ್ತರವಾಗಿದೆ. ಸರ್ಕಾರವೇ ಲಾರಿ ಮಾಲೀಕರ ಮೇಲೆ ವಿಧಿಸಿರುವ ಸುಂಕವನ್ನು ಕಡಿಮೆಗೊಳಿಸಿ ಸಹಕರಿಸಬೇಕು ಎಂದು ಕೇಳಿಕೊಂಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ