ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಂತ್ರಸ್ತರ ಸಾಲ ಮನ್ನಾ ಮಾಡಲು ಗೌಡರ ಆಗ್ರಹ (Flood | Victims | Crop loan | Devegowda)
Feedback Print Bookmark and Share
 
ಸರ್ಕಾರಕ್ಕೆ ಎಷ್ಟೇ ಕಷ್ಟವಾದರೂ ಸರಿ ನೆರೆ ಪೀಡಿತ ಪ್ರದೇಶಗಳ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸರ್ಕಾರವನ್ನು ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಿಸರ್ವ್ ಬ್ಯಾಂಕ್, ನಬಾರ್ಡ್ ಸೇರಿದಂತೆ ಯಾವುದೇ ಹಣಕಾಸು ಸಂಸ್ಥೆ ಆಕ್ಷೇಪ ವ್ಯಕ್ತಪಡಿಸಿದರೂ, ಗಣನೆಗೆ ತೆಗೆದುಕೊಳ್ಳದೆ, ಸಣ್ಣ ಹಾಗೂ ಮಧ್ಯಮ ರೈತರ ನೆರವಿಗೆ ತಕ್ಷಣವೇ ಸರ್ಕಾರ ಧಾವಿಸಬೇಕು ಎಂದು ಹೇಳಿದ್ದಾರೆ.

ಪ್ರವಾಹ ಸಂತ್ರಸ್ತ ರೈತರು ಮರಳಿ ಕೃಷಿ ಚಟುವಟಿಕೆಯಲ್ಲಿ ತೊಡಗುವಂತೆ ಮಾಡಬೇಕು. ಇದಕ್ಕಾಗಿ ಹಣ, ಬೀಜ, ಗೊಬ್ಬರ ನೀಡಬೇಕು. ವಿದ್ಯುತ್, ನೀರು ಮೊದಲಾದವುಗಳನ್ನು ಸೂಕ್ತ ರೀತಿಯಲ್ಲಿ ಪೂರೈಕೆ ಮಾಡಬೇಕು ಎಂದು ಅವರು ಸರ್ಕಾರಕ್ಕೆ ತಿಳಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ಕೇಂದ್ರ, ರಾಜ್ಯ ಸರಕಾರದೊಡನೆ ಜೆಡಿಎಸ್ ಸಂಘರ್ಷಕ್ಕೆ ಇಳಿಯುವುದಿಲ್ಲ. ಪರಿಹಾರ ಕಾರ್ಯಕ್ಕೆ ಸಹಕಾರ ನೀಡಲಾಗುವುದು. ನೆರೆ ಹಾವಳಿಗೊಳಗಾದ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ಬಗ್ಗೆ ಸರ್ಕಾರಗಳ ಗಮನ ಸೆಳೆಯಲಾಗುವುದು ಎಂದು ತಿಳಿಸಿದ ಅವರು, ಇಲ್ಲಿನ ಕಷ್ಟಕ್ಕೆ ಮತ್ತಷ್ಟು ಸ್ಪಂದಿಸುವಂತೆ ಪ್ರಧಾನಿ ಅವರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

100 ಲಾರಿ ದವಸ ಧಾನ್ಯ
ನೆರೆ ಸಂತ್ರಸ್ತರಿಗೆ ಜೆಡಿಎಸ್ ವತಿಯಿಂದ 100 ಲಾರಿ ದವಸ ಧಾನ್ಯ ಕಳುಹಿಸಿಕೊಡಲಾಗುವುದು. ಸಂಗ್ರಹಿಸಿದ 2.5 ಕೋಟಿ ರೂಪಾಯಿಗಳನ್ನು ಸಂತ್ರಸ್ತರಿಗೆ ನೀಡಲಾಗುವುದು. ಇದರ ನೇತೃತ್ವವನ್ನು ಎಚ್.ಡಿ. ಕುಮಾರಸ್ವಾಮಿ ವಹಿಸಲಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ