ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪ್ರವಾಹ: ಪಿಎಂ, ಸೋನಿಯಾ ಬಂದ್ರೂ, ಬಿಜೆಪಿಯವರೇಕೆ ಬಂದಿಲ್ಲ? (Flood in Karnataka | Ugrappa | Sonia | Congress | BJP Government)
Feedback Print Bookmark and Share
 
ಇದೀಗ ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿ ರಾಜಕೀಯ ಬಿರುಗಾಳಿಯನ್ನೂ ಎಬ್ಬಿಸುತ್ತಿದ್ದು, ಭೀಕರ ವಿಕೋಪಕ್ಕೆ ಪ್ರತಿಪಕ್ಷದವರು ಸ್ಪಂದಿಸುತ್ತಿಲ್ಲ ಎಂಬುದು ಸರ್ಕಾರದ ಆರೋಪವಾದರೆ, ಸೂಕ್ತವಾಗಿ ಪರಿಹಾರ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂಬುದು ಪ್ರತಿಪಕ್ಷದ ಆರೋಪ.

ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ, ರಾಜ್ಯದ ಅತಿವೃಷ್ಟಿ ಪ್ರದೇಶಗಳಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಹಲವು ಮುಖಂಡರು ಬಂದು ಭೇಟಿ ಮಾಡಿದ್ದಾರೆ. ಆದರೆ ಬಿಜೆಪಿಯಿಂದ ಯಾವೊಬ್ಬ ಹಿರಿಯ ನಾಯಕರೂ ಸ್ಥಳಕ್ಕೆ ಭೇಟಿ ನೀಡದಿರುವುದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವ್ಯತ್ಯಾಸವನ್ನು ತೋರಿಸುತ್ತದೆ ಎಂದಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಎಲ್. ಕೆ. ಅಡ್ವಾಣಿ ಸೇರಿದಂತೆ ಯಾವೊಬ್ಬ ಬಿಜೆಪಿ ಮುಖಂಡರೂ ಭೇಟಿ ನೀಡಿಲ್ಲ. ಜನ ಕಷ್ಟದಲ್ಲಿದ್ದಾರೆ. ಇವರು ಮಾತ್ರ ತಲೆಕೆಡಿಸಿಕೊಂಡಿಲ್ಲ ಎಂದು ಅವರು ಟೀಕಿಸಿದ್ದಾರೆ.

ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿದ್ದರೂ, ಮುಖ್ಯಮಂತ್ರಿ ಸೇರಿದಂತೆ ಸಚಿವರು ಸೂಕ್ತ ಮುನ್ನಚ್ಚರಿಕೆ ವಹಿಸದೆ, ಮೈಸೂರಿನ ಮಠದಲ್ಲಿ ಯೋಗಾಸನ ಮಾಡುತ್ತ ಕಾಲ ಕಳೆದರು ಎಂದು ಅವರು ಟೀಕಿಸಿದರು.
ಸಂಬಂಧಿತ ಮಾಹಿತಿ ಹುಡುಕಿ