ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ದೇಣಿಗೆ ಹಣ ದುರ್ಬಳಕೆಯಾಗಿಲ್ಲ: ಸುರೇಶ್ ಕುಮಾರ್ (Website | Flood relief | Sureshkumar | Misuse)
Feedback Print Bookmark and Share
 
ನೆರೆ ಸಂತ್ರಸ್ತರಿಗೆ ನೀಡಬೇಕಾದ ಪರಿಹಾರಕ್ಕಾಗಿ ಸಂಗ್ರಹಿಸಲಾಗಿರುವ ದೇಣಿಗೆ ಹಣವು ದುರುಪಯೋಗವಾಗಿಲ್ಲ. ಇದನ್ನು ಸಮರ್ಪಕವಾಗಿ ಹಾಗೂ ಪಾರದರ್ಶಕವಾಗಿ ನಿರ್ವಹಿಸಲು ವೆಬ್ ಸೈಟ್ ಒಂದನ್ನು ರೂಪಿಸಲಾಗಿದ್ದು, ಇದರಲ್ಲಿ ಯಾವುದೇ ಅವ್ಯವಹಾರಕ್ಕೆ ಅವಕಾಶವಿಲ್ಲ ಎಂದು ಕಾನೂನು ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಕಾಶನಗರದಲ್ಲಿ ನಿರ್ಮಿಸಲಾಗುತ್ತಿರುವ ಒಳಾಂಗಣ ಕ್ರೀಡಾಂಗಣ ಸಂಕೀರ್ಣದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲೆ ವಿಶ್ವಾಸವಿರಿಸಿ ಜನತೆಯು ನೀಡಿರುವ ಹಣವನ್ನು ದುರುಪಯೋಗಪಡಿಸಿಕೊಂಡರೆ ಅದಕ್ಕಿಂತ ಮಹಾಪಾಪ ಇನ್ನಿಲ್ಲ. ಹಾಗಾಗಿ ಸಮಗ್ರ ವಿವರಗಳನ್ನೂ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತಿದೆ ಎಂದು ನುಡಿದರು.

ಇಡೀ ಸಮಾಜವೇ ಸರ್ಕಾರದ ಬೆಂಬಲಕ್ಕೆ ನಿಂತಿರುವ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಪುನರ್ವಸತಿಗಾಗಿ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದು, ಇದರ ಒಂದು ಅಂಗವಾಗಿ ರೂಪಿಸಿರುವ ವೆಬ್ ಸೈಟ್‌ನಲ್ಲಿ ಈವರೆಗೆ ಸಂಗ್ರಹವಾಗಿರುವ ಹಣ ಮತ್ತು ಯಾರು ಎಷ್ಟು ದೇಣಿಗೆ ನೀಡಿದ್ದಾರೆ ಎಂಬ ವಿವರಗಳೆಲ್ಲಾ ಲಭ್ಯವಿವೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಸಂಗ್ರಹಗೊಂಡ ಹಣದಲ್ಲಿ ಯಾವ ಬಾಬ್ತಿಗೆ ಎಷ್ಟು ಹಣ ಖರ್ಚಾಗಿದೆ ಎಂಬ ವಿವರಗಳೂ ಇದರಲ್ಲಿದ್ದು ಇದರ ಮಾಹಿತಿಯನ್ನು ಸಾರ್ವಜನಿಕರು ಯಾವಾಗ ಬೇಕಿದ್ದರೂ ಪಡೆಯಬಹುದಾಗಿದೆ. ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ದೃಷ್ಟಿಯಿಂದ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಹೀಗಾಗಿ ಹಣ ದುರುಪಯೋಗದ ಪ್ರಶ್ನೆಯೇ ಇಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ