ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪ್ರವಾಹ ಪ್ರಕೋಪ: ಕ .ಸಾ. ಸಮ್ಮೇಳನ ಮುಂದೂಡಿಕೆ (Sriramulu | Flood | North karnataka | Hiremath)
Feedback Print Bookmark and Share
 
ರಾಜ್ಯದ ಉತ್ತರ ಕರ್ನಾಟಕದ ಭಾಗಗಳಲ್ಲಿ ಸಂಭವಿಸಿರುವ ಪ್ರವಾಹದ ಹಿನ್ನೆಲೆಯಲ್ಲಿ, ಡಿಸೆಂಬರ್ ತಿಂಗಳಿನಲ್ಲಿ ಆಯೋಜಿಸಲಾಗಿದ್ದ 76ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಇದರ ಕುರಿತು ಚರ್ಚಿಸಲು ವ್ಯವಸ್ಥೆಗೊಳಿಸಲಾಗಿದ್ದ ಸಭೆಯೊಂದರಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯು ಈ ತೀರ್ಮಾನವನ್ನು ಕೈಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರೂ ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷರೂ ಆದ ಬಿ.ಶ್ರೀರಾಮುಲು ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು ಎಂದು ಸುದ್ದಿಮೂಲಗಳು ತಿಳಿಸಿವೆ.

ವಿವಿಧೆಡೆಗಳಲ್ಲಿ ಜಲಪ್ರಳಯವೇ ಸಂಭವಿಸಿ, ಲಕ್ಷಾಂತರ ಜನ ನೋವಿನಲ್ಲಿ ಮುಳುಗಿರುವಾಗ ಸಾಹಿತ್ಯ ಸಮ್ಮೇಳನವನ್ನಾಗಲೀ ಅಥವಾ ಇನ್ನಾವುದೇ ಸಾಂಸ್ಕೃತಿಕ-ಮನರಂಜನಾತ್ಮಕ ಕಾರ್ಯಕ್ರಮಗಳನ್ನಾಗಲೀ ಸದ್ಯಕ್ಕೆ ಹಮ್ಮಿಕೊಳ್ಳುವುದು ಬೇಡ ಎಂಬ ತೀರ್ಮಾನವನ್ನು ಸಭೆಯು ಒಕ್ಕೊರಲಿನಿಂದ ಅನುಮೋದಿಸಿತು ಎಂದು ತಿಳಿದುಬಂದಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲೂ ಸಮ್ಮೇಳನದ ಮುಂದೂಡಿಕೆಯ ಕುರಿತು ನಿರ್ಧರಿಸಲಾಗಿತ್ತು. ಅಷ್ಟೇ ಅಲ್ಲದೇ, ಜಿಲ್ಲಾ ಕಸಾಪ ಅಧ್ಯಕ್ಷರಾದ ಪ್ರೊ. ಎ.ಬಿ. ಹಿರೇಮಠ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟಗಳ ಸಮ್ಮೇಳಗಳನ್ನೂ ಸಹ ಮೂರು ತಿಂಗಳವರೆಗೆ ಮುಂದೂಡಲು ನಿರ್ಧರಿಸಲಾಗಿದೆ ಎಂದು ಸುದ್ದಿಮ‌ೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ