'ಲವ್ ಜಿಹಾದ್' ಪ್ರಕರಣದ ಕುರಿತು ಕಳವಳ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ ಈ ಬಗ್ಗೆ ಹೈಕೋರ್ಟ್ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಹೇಳಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಲವ್ ಜಿಹಾದ್ ಬಗ್ಗೆ ಚರ್ಚೆ ನಡೆಸಿದ್ದು, ಆ ನಿಟ್ಟಿನಲ್ಲಿ ಶುಕ್ರವಾರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ವಿ.ಎಸ್.ಆಚಾರ್ಯ ತಿಳಿಸಿದ್ದಾರೆ.
ಲವ್ ಜಿಹಾದ್ ಪ್ರಕರಣದ ಕುರಿತು ಕೇರಳ ಸರ್ಕಾರದಿಂದ ಮಾಹಿತಿ ಪಡೆಯಲು ಕೂಡ ನಿರ್ಧರಿಸಲಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸೆಲ್ವಾರಾಜ್‌ಳನ್ನು ಲವ್ ಜಿಹಾದ್ ಹೆಸರಲ್ಲಿ ಪ್ರೀತಿಸಿ, ಮತಾಂತರ ಮಾಡಲಾಗಿತ್ತು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಣೆಯಾಗಿದ್ದ ತಮ್ಮ ಮಗಳನ್ನು ಹುಡುಕಿ ಕೊಡುವಂತೆ ಆಕೆಯ ತಂದೆ ಸಿ.ಸೆಲ್ವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಪ್ರಕರಣದ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ಸೆಲ್ವಾರಾಜ್ ತನ್ನಿಚ್ಚೆಯಿಂದಲೇ ಮತಾಂತರ ಮತ್ತು ಮದುವೆಯಾಗಿರುವುದರಿಂದ ಈ ಪ್ರಕರಣವನ್ನು ಲವ್ ಜಿಹಾದ್ ಎಂದು ಹೇಳಲಾಗದು ಎಂದು ಸ್ಪಷ್ಟಪಡಿಸಿತ್ತು. ಆದರೆ ಹೆಚ್ಚಿನ ವಿವರಗಳನ್ನು ಕಲೆ ಹಾಕುವಂತೆ ಈ ಸಂದರ್ಭದಲ್ಲಿ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.