ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 'ಕಲಾಂಪುರ' ಯೋಜನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್ (Abdul Kalam | Acharya | Pura project | Jalanirman project | Yeddyurappa,)
ರಾಜ್ಯದ 200ಹೋಬಳಿಗಳಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಪುರ ಯೋಜನೆ ಜಾರಿಗೆ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿರುವುದಾಗಿ ಗೃಹ ಸಚಿವ ವಿ.ಎಸ್.ಆಚಾರ್ಯ ತಿಳಿಸಿದ್ದಾರೆ.
ಸಚಿವ ಸಂಪುಟದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಈ ಯೋಜನೆಯ ಮುಖ್ಯ ಗುರಿ ಎಂದರು. ರಾಜ್ಯದ 200 ಹೋಬಳಿಗಳಲ್ಲಿ ಪುರ ಯೋಜನೆ ಜಾರಿಗೆ ಬರಲಿದೆ. ಪ್ರಮುಖವಾಗಿ ನೀರು, ವಿದ್ಯುತ್, ರಸ್ತೆ, ಶಾಲೆ, ದೂರವಾಣಿ ಸೇರಿದಂತೆ ಮೂಲಭೂತ ಸೌಕರ್ಯಗಳ ಬಗ್ಗೆ ಗಮನ ಹರಿಸಲಾಗುವುದು. ಪ್ರತಿ ಗ್ರಾಮಕ್ಕೂ 1ಕೋಟಿ ರೂಪಾಯಿ ಖರ್ಚು ಮಾಡಲಾಗುವುದು ಎಂದರು.
ರಾಜ್ಯದ ರಸ್ತೆಗಳ ದುರಸ್ತಿಗೆ 195ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಜೊತೆಗೆ ಜಲನಿರ್ಮಾಣ ಯೋಜನೆಗೆ 1,100ಕೋಟಿ ರೂಪಾಯಿ ಬೇಕಿದ್ದು, ವಿಶ್ವಬ್ಯಾಂಕ್ ಸಹಾಯದಡಿ ಯೋಜನೆ ಜಾರಿಗೆ ತರಲಾಗುವುದು ಎಂದು ಈ ಸಂದರ್ಭದಲ್ಲಿ ಹೇಳಿದರು.