ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಕ್ರಿಯ ರಾಜಕಾರಣದಿಂದ ಮಾಜಿಯಾಗಲಾರೆ: ದೇವೇಗೌಡ (Devegowda | Politician | Politics | JDS | Kadur)
Feedback Print Bookmark and Share
 
NRB
ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು, ಸಕ್ರಿಯ ರಾಜಕಾರಣದಿಂದ ಮಾಜಿಯಾಗಲಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರಿಳಿತಗಳನ್ನು ಕಂಡಿದ್ದೇನೆ ಎಂದ ಅವರು, ಪಕ್ಷದಲ್ಲಿದ್ದು ಕತ್ತು ಕೊಯ್ಯುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಗುಡುಗಿದ್ದಾರೆ.

ಕಡೂರು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೌಡರು, ಜಾತಿ-ಧರ್ಮದ ಹೆಸರಿನಲ್ಲಿ ಅಭಿವೃದ್ಧಿ ಕೆಲಸ ಮಾಡುವುದಿಲ್ಲ. ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಲು ಏನೇನು ಮಾಡಲು ಸಾಧ್ಯ ಎಂಬುದರ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ರೈತರ, ಜನಸಾಮಾನ್ಯರ ಕಷ್ಟಗಳನ್ನು ಬಗೆಹರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ