ತಾವು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ಸ್ಪರ್ಧಾಳುವಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಬಾಗಲಕೋಟೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಡಿಸೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಭಾವಿ ಸಚಿವೆ ಎಂದೇ ಗುರುತಿಸಿಕೊಂಡಿರುವ ಶೋಭಾ ಅವರನ್ನು ಮುಂದಿನ ರಾಜ್ಯಾಧ್ಯಕ್ಷರ ಪಟ್ಟಕ್ಕೆ ಏರಿಸುವ ಕಸರತ್ತು ನಡೆಯುತ್ತಿರುವುದಾಗಿ ಪಕ್ಷದ ವಲಯದಲ್ಲಿ ಕೇಳಿ ಬಂದಿತ್ತು. ಆದರೆ ಈ ವಿಚಾರವನ್ನು ಕರಂದ್ಲಾಜೆ ತಳ್ಳಿಹಾಕಿದ್ದಾರೆ.
ಕಳೆದ ಒಂದು ಕಾಲು ವರ್ಷದಿಂದ ತಾವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆಯಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಗ್ರಾಮೀಣಾಭಿವೃದ್ಧಿಯಲ್ಲಿ ಮಹತ್ವದ ಬದಲಾವಣೆ ತರಬೇಕು ಎಂಬುದು ತಮ್ಮ ಮುಂದಿನ ಗುರಿ. ಮುಂದಿನ ಮೂರು ವರ್ಷಗಳಲ್ಲಿ ಅಭಿವೃದ್ಧಿ ಕಡೆಗೆ ಹೆಚ್ಚು ಗಮನ ನೀಡಿ ಜನ ಮೆಚ್ಚುವಂತಹ ಕೆಲಸ ಮಾಡಬೇಕೆಂದಿದ್ದೇನೆ. ತಮಗೆ ರಾಜ್ಯಾಧ್ಯಕ್ಷರ ಹುದ್ದೆಯಲ್ಲಿ ಆಸಕ್ತಿ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.