ಆಡಳಿತಾತ್ಮಕ ವಿಚಾರಗಳಿಗೆ ಸಂಬಂಧಿಸಿದಂತೆ ಬಳ್ಳಾರಿಯ ಸಚಿವತ್ರಯರಲ್ಲಿ ಅಸಮಾಧಾನ ಇದೆ. ಅದು ಭಿನ್ನಾಭಿಪ್ರಾಯ ಅಲ್ಲ ಎಂದು ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ಲೇಷಿಸಿದ್ದಾರೆ.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕುಟುಂಬದ ಸದಸ್ಯರ ನಡುವೆ ಸಮಸ್ಯೆ ಬರುವ ರೀತಿ ಇದು. ಇದನ್ನು ಚರ್ಚಿಸಿ ಬಗೆಹರಿಸಲಾಗುವುದು ಎಂದರು. ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ನಾಯಕತ್ವ ಬದಲಾವಣೆ ಇಲ್ಲ ಎಂದರು.
ಯಾವ ಸಚಿವರು ಸಹ ಬೇರೆ ಯಾವ ಖಾತೆಯಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಇಂತಹ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದರು. ಲೋಡ್ ಶೆಡ್ಡಿಂಗ್ ಬಗ್ಗೆ ಬೇಡಿಕೆ ಹೆಚ್ಚಾಗುತ್ತಿದೆ. ಮೊದಲು 105ಮಿ.ಯೂನಿಟ್ ಇದ್ದು, ಈಗ 121ಮಿ.ಯುನಿಟ್ ಆಗಿದೆ. ಬೇಡಿಕೆ ಹಾಗೂ ಉತ್ಪಾದನೆ ಪ್ರಮಾಣ ನೋಡಿಕೊಂಡು ಅಧಿಕಾರಿಗಳ ಸಭೆ ಕರೆದು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.