ಇತ್ತೀಚೆಗೆ ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲಲು ಕಾಂಗ್ರೆಸ್ ಪಕ್ಷದ ನಾಯಕರೇ ಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಕಾಲೆಳೆಯುವವರ ಸಂಖ್ಯೆ ಹೆಚ್ಚಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು. ಆ ನಿಟ್ಟಿನಲ್ಲಿ ಪಕ್ಷದ ಎಲ್ಲಾ ನಾಯಕರು ವೈಷಮ್ಯ ಮರೆತು ಪಕ್ಷವನ್ನು ಕಟ್ಟಿ ಬೆಳೆಸಬೇಕಾಗಿದೆ ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಪಕ್ಷ ಹೀನಾಯವಾಗಿ ಸೋಲಿಗೆ ಪಕ್ಷದ ಎಲ್ಲಾ ಮುಖಂಡರು ಹೊಣೆ ಹೊರಬೇಕಾಗಿದೆ ಎಂದರು. ಬೂತ್ ಮಟ್ಟದಿಂದ ಪಕ್ಷದ ಬಲವರ್ಧನೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿಯೂ ಈ ಸಂದರ್ಭದಲ್ಲಿ ಹೇಳಿದರು.