ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜನಾರ್ದನ ರೆಡ್ಡಿ ಯು ಟರ್ನ್: ಸಿಎಂ ಬಗ್ಗೆ ಅಪಾರ ಗೌರವವಿದೆ (Yeddyurappa | janardhan reddy | BJP | RSS | Arun jaitely | Bellary | Karunakara Reddy,)
Feedback Print Bookmark and Share
 
ರಾಜ್ಯರಾಜಕಾರಣದಲ್ಲಿ ಕಳೆದ ಮೂರು ದಿನಗಳಿಂದ ಬಳ್ಳಾರಿ ಸಚಿವರಿಂದ ಉದ್ಭವಗೊಂಡ ಬಂಡಾಯದ ರಣಕಹಳೆ ಗುರುವಾರ ಯು ಟರ್ನ್ ತೆಗೆದುಕೊಂಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಅಪಾರ ಗೌರವವಿದೆ. ಆದರೆ ವಿನಾಶ ಕಾಲೇ ವಿಪರೀತ ಬುದ್ದಿ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇಂದು ಸಂಜೆ ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬಗ್ಗೆ ಗೌರವವಿದೆ. ಆದರೆ ಅವರ ಸುತ್ತಮುತ್ತ ಇರುವ ಕೆಲವು ದುಷ್ಟಶಕ್ತಿಗಳಿಂದಾಗಿ ಬಿಕ್ಕಟ್ಟು ಉದ್ಭವವಾಗಿದೆ. ನೆರೆ ಸಂತ್ರಸ್ತರ ವಿಷಯಕ್ಕೆ ಸಂಬಂಧಿಸಿದಂತೆ ಮಂತ್ರಿಮಂಡಲದ ಕೆಲವರ ಮಾತು ಕೇಳಿದ ಸಿಎಂ ನಮಗೆ ಸಾಕಷ್ಟು ನೋವು ಆಗುವ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ದೂರಿದರು.

ಕಂದಾಯ ಸಚಿವ ಕರುಣಾಕರ ರೆಡ್ಡಿ ಅವರನ್ನು ಮೂಲೆಗುಂಪು ಮಾಡಿದ್ದಾರೆ. ಇದಕ್ಕೆ ಕಾರಣ ಏನು ಎಂದು ಪ್ರಶ್ನಿಸಿದ ರೆಡ್ಡಿ, ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡಲು ಗಣಿ ಮಾಲೀಕರು ಮುಂದೆ ಬಂದರೆ ಅದಕ್ಕೆ ಅಡ್ಡಗಾಲು ಹಾಕುವುದಾದರೂ ಯಾಕೆ ಎಂದು ಪ್ರಶ್ನಿಸಿದರು. ಕರುಣಾಕರ ರೆಡ್ಡಿ ಅವರ ನೇತೃತ್ವದಲ್ಲಿ ಮನೆಗಳ ನಿರ್ಮಾಣ ಮಾಡಿದರೆ ರೆಡ್ಡಿಗಳು ರಾಜಕೀಯವಾಗಿ ಮತ್ತಷ್ಟು ಪ್ರಬಲರಾಗುತ್ತಾರೆ ಎಂದು ಸಿಎಂಗೆ ತಲೆ ಕೆಡಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾವು ಬಿಜೆಪಿಯಿಂದಲೇ ರಾಜಕೀಯ ಆರಂಭಿಸಿದವರು, ಹಾಗೆ ಬಿಜೆಪಿಯಲ್ಲೇ ರಾಜಕೀಯ ಜೀವನ ಅಂತ್ಯಗೊಳ್ಳಲಿದೆ ಎಂದ ಅವರು, ಬೇರೆ ಪಕ್ಷಕ್ಕೆ ಹೋಗುವ ಮಾತೇ ಇಲ್ಲ. ಸರ್ಕಾರ ಪಾರದರ್ಶಕವಾಗಿ ನಡೆಯಬೇಕು ಎಂಬುದು ನಮ್ಮ ಆಗ್ರಹ. ಅದಕ್ಕೆ ಉತ್ತಮ ನಾಯಕರ ಅಗತ್ಯವಿದೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ