ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಕುರ್ಚಿ ಭದ್ರ: ಬದಲಾವಣೆಯ ಪ್ರಶ್ನೆಯೇ ಇಲ್ಲ (Yadyurappa | Chief Minister | High Comand | BJP)
Feedback Print Bookmark and Share
 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಅವರ ನೇತೃತ್ವದಲ್ಲೇ ಸರ್ಕಾರ ಮುಂದುವರಿಯಲಿದೆ ಎಂಬುದಾಗಿ ಬಿಜೆಪಿ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದೆ. ಪರಸ್ಪರ ತಿಕ್ಕಾಟಕ್ಕಿಳಿದಿರುವ ಉಭಯ ಬಣಗಳ ನಡುವೆ ರಾಜೀಸಂಧಾನಕ್ಕೆ ಮುಂದಾಗಿರುವ ಹಿರಿಯರು ಈ ನಿಟ್ಟಿನಲ್ಲಿ ಯೋಚನೆಗೆ ಮುಂದಾಗಿದ್ದಾರೆ.

ಯಡಿಯೂರಪ್ಪ ಅವರ ನಿಷ್ಠರೆನ್ನಲಾದ ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ, ಸಾರಿಗೆ ಸಚಿವ ಅಶೋಕ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಕುಮಾರ್, ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ, ಕೈಗಾರಿಕಾ ಸಚಿವ ಸುಬ್ರಮಣ್ಯನಾಯ್ಡು, ರಾಜ್ಯದ ವಿಶೇಷ ಪ್ರತಿನಿಧಿ ಧನಂಜಯ ಕುಮಾರ್ ಮೊದಲಾದವರು ಭಾನುವಾರ ಪಕ್ಷದ ಹಿರಿಯ ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿ ನಾಯಕತ್ವ ಬದಲವಾಣೆ ಇಲ್ಲ ಎಂಬ ಸ್ಪಷ್ಟ ಸಂದೇಶ ರವಾನೆಯಾಗಿದೆ.

ಸಭೆಯಲ್ಲಿ ಪಾಲ್ಗೊಂಡಿದ್ದ ಹಿರಿಯ ಮೂವರೂ ನಾಯಕರಾದ ಎಲ್.ಕೆ. ಆಡ್ವಾಣಿ, ಸುಷ್ಮಾ ಸ್ವರಾಜ್ ಪಕ್ಷದ ರಾಷ್ಟ್ರಾಧ್ಯಕ್ಷ ರಾಜ್‌ನಾಥ್ ಸಿಂಗ್ ಅವರುಗಳು ಪಕ್ಷದ ನಾಯಕತ್ವ ಬದಲಾವಣೆಯ ಪರವಾಗಿಲ್ಲ ಎಂಬುದಾಗಿ ಮೂಲಗಳು ತಿಳಿಸಿವೆ.

ಬಳ್ಳಾರಿ ರೆಡ್ಡಿ ಸಹೋದರರಿಗೆ ಆತ್ಮ್ಮೀಯರಾದ ಲೋಕಸಭೆ ಉಪ ನಾಯಕಿ ಸುಷ್ಮಾ ಸ್ವರಾಜ್ ಅವರೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆಗೆ ಒಲವು ತೋರಿಲ್ಲ. ದಕ್ಷಿಣದಲ್ಲಿ ಮೊದಲ ಬಾರಿಗೆ ಪಕ್ಷ ಅಧಿಕಾರಕ್ಕೆ ಬಂದಿದ್ದು, ನಾಯಕತ್ವ ಬದಲಾವಣೆಗೆ ಕೈಹಾಕುವ ಮೂಲಕ ಬಿಜೆಪಿ ಸರ್ಕಾರವನ್ನು ಅಭದ್ರಗೊಳಿಸುವುದು ಬೇಡ ಎಂಬ ಸೂಚನೆ ನೀಡಿದ್ದಾರೆನ್ನಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ