ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮೂಡಿರುವ ಒಡಕು ಇನ್ನು ಎರಡು ಮೂರು ದಿನಗಳಲ್ಲಿ ಸುಖಾಂತ್ಯ ಕಾಣಲಿದೆ. ಯಾರಿಗೆ ದೈವಬಲ ಇದೆಯೋ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿಯುವ ಸಾಧ್ಯತೆ ಇದೆ ಎಂದು ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಡಾ.ಮುಮ್ತಾಜ್ ಅಲಿಖಾನ್ ಮಾರ್ಮಿಕವಾಗಿ ಹೇಳಿದ್ದಾರೆ.
ನಗರದಲ್ಲಿ ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಆಯೋಗ ಸರ್ಕಾರದ ವಿವಿಧ ಇಲಾಖೆಗಳಿಂದ ಅಲ್ಪ ಸಂಖ್ಯಾತರಿಗೆ ಲಭ್ಯವಿರುವ ಸವಲತ್ತುಗಳ ಬಗೆಗಿನ ಅರಿವು ಮೂಡಿಸುವ ಶಿಬಿರದಲ್ಲಿ ಪಾಲ್ಗೊಂಡ ನಂತರ ಭಿನ್ನಾಭಿಪ್ರಾಯ ಸದ್ಯದಲ್ಲೇ ಶಮನವಾಗಿ ರಾಜ್ಯದಲ್ಲಿ ಉತ್ತಮ ರಾಜಕೀಯ ಪರಿಸ್ಥಿತಿ ನಿರ್ಮಾಣವಾಗಲಿದೆ. ಅದಕ್ಕೆ ಎರಡು ಮೂರು ದಿನ ಕಾದು ನೋಡಿ. ಆದರೆ ಯಾರಿಗೆ 'ದೇವರ' ಕೃಪಾಕಟಾಕ್ಷವಿದೆಯೋ ಅವರು ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯುವವರು ಎಂದರು.
ರೆಡ್ಡಿ ಸಹೋದರರು, ಯಡಿಯೂರಪ್ಪ ಹಾಗೂ ಸ್ಪೀಕರ್ ಜಗದೀಶ್ ಶೆಟ್ಟರ್ ಈ ಪೈಕಿ ಯಾವ ಬಣದಲ್ಲಿ ತಾವು ಗುರುತಿಸಿಕೊಳ್ಳುತ್ತೀರಿ ಎಂಬ ಪ್ರಶ್ನೆಗೆ, ತಾವು ಯಡಿಯೂರಪ್ಪನವರಿಗೆ ನಿಷ್ಠರಾಗಿರುವುದಾಗಿ ತಿಳಿಸಿದರು.