ವಿಧಾನ ಪರಿಷತ್ತಿನ ಉಪ ಸಭಾಪತಿ ಸೇರಿದಂತೆ ಶಿಕ್ಷಣ ಕ್ಷೇತ್ರದಿಂದ ಆಯ್ಕೆಯಾಗಿರುವ ಮೂವರು ಶಾಸಕರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ತಿರುಗಿ ಬಿದ್ದಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಕಾಗೇರಿ ಅವರ ರಾಜೀನಾಮೆಗೆ ಆಗ್ರಹಿಸಿ ಸದ್ಯದಲ್ಲೇ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳನ್ನು ಬಂದ್ ಮಾಡಿಸಿ ದೊಡ್ಡ ಹೋರಾಟ ಆರಂಭಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಉಪ ಸಭಾಪತಿ ಹುದ್ದೆಗೆ ರಾಜೀನಾಮೆ ನೀಡಿ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ಪುಟ್ಟಣ್ಣ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುಟ್ಟಣ್ಣ, ಶಾಸಕರಾದ ಮರಿತಿಬ್ಬೇಗೌಡ, ವೈ.ಎ.ನಾರಾಯಣ ಸ್ವಾಮಿ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ. ಮಂಜುನಾಥ್ ಅಧಿಕಾರಕ್ಕೆ ಬಂದು ಶಿಕ್ಷಣ ಕ್ಷೇತ್ರದ ಒಂದೇ ಸಮಸ್ಯೆಯನ್ನೂ ಪರಿಹರಿಸುವಲ್ಲಿ ಕಾಗೇರಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.