ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕುಮಾರಸ್ವಾಮಿ ಡಕಾಯಿತ: ಜನಾರ್ದನ ರೆಡ್ಡಿ ವಾಗ್ದಾಳಿ (Kumaraswamy | JDS | Janardana Reddy | Deve gowda | CBI)
Bookmark and Share Feedback Print
 
NRB
ಅಕ್ರಮ ಗಣಿಗಾರಿಕೆ ಕುರಿತಂತೆ ರಾಜಕಾರಣಿಗಳ ಕೆಸರೆರಚಾಟ ಮುಂದುವರಿದಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಬ್ಬ ಡಕಾಯಿತ, ಮಾಫಿಯಾ ಲೀಡರ್ ಎಂದು ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಶನಿವಾರ ತಾಲೂಕಿನ ರೂಪನಗುಡಿ ಏತ ನೀರಾವರಿ ಯೋಜನೆಗೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಮತ್ತು ಓಎಂಸಿ ಗಣಿಗಾರಿಕೆ ವಿರುದ್ಧ ಸಿಬಿಐ ತನಿಖೆ ಬಗ್ಗೆ ಪ್ರತಿಕ್ರಿಯಿಸಿ, ನಾವು ಯಾವುದೇ ಅಕ್ರಮ ಗಣಿಗಾರಿಕೆ ನಡೆಸುತ್ತಿಲ್ಲ. ಕುಮಾರಸ್ವಾಮಿ,ಗೌಡ ಹಾಗೂ ನಾಯ್ಡು ರಾಜಕೀಯ ದುರುದ್ದೇಶದಿಂದ ಆರೋಪ ಹೊರಿಸುತ್ತಿದ್ದಾರೆಂದು ದೂರಿದರು.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೇ ಬಳ್ಳಾರಿಯಲ್ಲಿನ ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಆಗ್ರಹಿಸಿದ್ದೆ ಎಂದರು. ಅಲ್ಲದೆ, ಕುಮಾರಸ್ವಾಮಿ ವಿರುದ್ಧವೂ ಸಿಬಿಐ ತನಿಖೆ ನಡೆಸುವಂತೆ ಕೋರಿದ್ದೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ