ಕುರ್ಚಿ ಮೇಲಿನ ಆಸೆಯಿಂದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ವಾಭಿಮಾನವನ್ನೇ ಮಾರಿಕೊಂಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಭಾನುವಾರ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ವಿಚಾರ ಕುರಿತಂತೆ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಮಹಾದ್ರೋಹ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿಯಲ್ಲಿ ಗಣಿಧಣಿಗಳು ನಡೆಸುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿರುವ ಅವರು, ರೆಡ್ಡಿ ಸಹೋದರರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ತಡೆಯುವಲ್ಲಿ ಮುಖ್ಯಮಂತ್ರಿಗಳು ಸಂಪೂರ್ಣವಾಗಿ ವಿಫಲರಾಗಿ, ರೆಡ್ಡಿ ಸಹೋದರರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದರು.