ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಎಚ್‌‌ಡಿಕೆ ಕಾಂಗ್ರೆಸ್ ಸೇರ್ಪಡೆಗೆ ಸೋನಿಯಾ ಆಹ್ವಾನ! (Kumaraswamy | JDS | Congress | Sonia gandhi | Desh pandy)
Bookmark and Share Feedback Print
 
PTI
ಕಾಂಗ್ರೆಸ್ ವಿರುದ್ಧ ಹರಿಹಾಯುತ್ತಿದ್ದ ಜೆಡಿಎಸ್ ಕೊನೆಗೂ ಕೈ ಜೊತೆ ಮೈತ್ರಿ ಮಾಡಿಕೊಂಡಿದೆ. ಆದರೆ ಇದೀಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕಾಂಗ್ರೆಸ್ ಸೇರುವಂತೆ ಸ್ವತಃ ಸೋನಿಯಾ ಗಾಂಧಿಯೇ ಆಮಂತ್ರಣ ನೀಡಿದ್ದರು ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ನಡೆದ ಬೆಂಗಳೂರು ಗ್ರಾಮಾಂತರ ವಿಧಾನಪರಿಷತ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಇ.ಕೃಷ್ಣಪ್ಪ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೋಲಿನ ರುಚಿ ಉಣ್ಣುತ್ತಿರುವ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕುಮಾರಸ್ವಾಮಿಗೆ ಸೋನಿಯಾ ಆಹ್ವಾನ ನೀಡಿದ್ದರು ಎಂದು ಬಹಿರಂಗಪಡಿಸಿದ್ದಾರೆ.

ಅಪ್ಪ-ಮಕ್ಕಳ ಪಕ್ಷ, ಸ್ವಾರ್ಥ ರಾಜಕಾರಣ ಮಾಡುತ್ತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್‌ನಲ್ಲಿಯೇ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಅಂತೂ ಪಕ್ಷದ ಹೈಕಮಾಂಡ್ ನಿರ್ಧಾರದ ಮೇರೆಗೆ ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ನಡೆದಿದೆ.

ಆ ನಿಟ್ಟಿನಲ್ಲಿ ಕಾಂಗ್ರೆಸ್‌ನಲ್ಲಿಯೇ ಜೆಡಿಎಸ್ ವಿರುದ್ಧ ಸಾಕಷ್ಟು ಅಸಮಾಧಾನ ಹೊಂದಿರುವ ಮುಖಂಡರಿದ್ದಾರೆ. ಇದೀಗ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿಯವರೇ ಕುಮಾರಸ್ವಾಮಿಗೆ ಕಾಂಗ್ರೆಸ್ ಸೇರುವಂತೆ ಆಹ್ವಾನ ನೀಡಿದ್ದಾರೆಂಬ ಬಾಲಕೃಷ್ಣ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಮತ್ತೊಂದು ಕಿಚ್ಚು ಹಚ್ಚಲಿದೆ ಎಂದು ರಾಜಕೀಯ ಪಡಸಾಲೆಯಲ್ಲಿ ಗುಸುಗುಸು ಕೇಳಿ ಬರುತ್ತಿದೆ.
ಸಂಬಂಧಿತ ಮಾಹಿತಿ ಹುಡುಕಿ