ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಳ್ಳಾರಿ ವಿಮಾನ ನಿಲ್ದಾಣ ವಿವಾದ:ದಿವಾಕರ ಬಾಬು ಬಂಧನ (Ballary | Divakar babu | Congress | Air port)
Bookmark and Share Feedback Print
 
ರೈತರ ತೀವ್ರ ವಿರೋಧದ ನಡುವೆಯೂ ಬಳ್ಳಾರಿಯ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಚಾಗನೂರು ,ಸಿರಿವಾರ ಸೇರಿದಂತೆ ಸುಮಾರು ಎಂಟು ಪ್ರದೇಶಗಳಲ್ಲಿ ಸರ್ವೆ ಕಾರ್ಯ ಮಂಗಳವಾರ ಆರಂಭಗೊಂಡಿದ್ದು, ಮುನ್ನೆಚ್ಚರಿಕೆ ಅಂಗವಾಗಿ ಮಾಜಿ ಸಚಿವ ದಿವಾಕರ ಬಾಬು ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.

ರೈತರ ಭೂಮಿಯನ್ನು ಬಲವಂತವಾಗಿ ಸರ್ಕಾರ ವಶಪಡಿಸಿಕೊಳ್ಳಲು ಮುಂದಾಗಿದೆ ಎಂದು ರೈತ ಮುಖಂಡ ಶಿವಶಂಕರಪ್ಪ ಆರೋಪಿಸಿದ್ದಾರೆ. ಆದರೆ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ನೆಲೆಯಲ್ಲಿ ಶಿವಶಂಕರಪ್ಪ, ಆಂಜನೇಯ ಹಾಗೂ ಲಕ್ಷಮ್ಮ ಎಂಬವರನ್ನೂ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ರಾಜ್ಯ ಕೆಐಎಡಿಬಿ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಸರ್ವೆ ಕಾರ್ಯ ಆರಂಭಿಸಿದ್ದಾರೆ. ಏತನ್ಮಧ್ಯೆ ಬಳ್ಳಾರಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮೂರು ಸ್ಥಳಗಳಲ್ಲಿ ನಾಕಾಬಂಧಿ ಮಾಡಲಾಗಿದೆ.

ರೈತರು ತಮ್ಮ ಹೊಲಗಳಲ್ಲಿ ಅಡಗಿಕೊಂಡಿದ್ದು, ಅವರೆಲ್ಲರನ್ನೂ ಪೊಲೀಸರು ಹುಡುಕಾಡಿ ಬಂಧಿಸುತ್ತಿದ್ದಾರೆ. ಬಹಳಷ್ಟು ರೈತ ಮುಖಂಡರು ಈಗಾಗಲೇ ನಾಪತ್ತೆಯಾಗಿದ್ದಾರೆ. ಬಲವಂತವಾಗಿ ರೈತರ ಭೂಮಿಯನ್ನು ವಶಪಡಿಸಿಕೊಳ್ಳುತ್ತಿರುವ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ರೈತ ಮುಖಂಡರು,ಈ ಬಗ್ಗೆ ಉಗ್ರ ಸ್ವರೂಪ ಹೋರಾಟ ನಡೆಸಲಾಗುವುದು ಎಂದು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ