ಗಣಿ ಮತ್ತು ನೈಸ್ ವಿಚಾರದಲ್ಲಿ ರಾಜ್ಯ ಸರ್ಕಾರ ಕಾನೂನು ಮೀರಿ ನಡೆದುಕೊಂಡಿಲ್ಲ ಎಂದು ರಾಜ್ಯ ಕಾನೂನು ಮತ್ತು ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಅವರು, ಪ್ರತಿಪಕ್ಷಗಳು ನಮ್ಮ ವಿರುದ್ಧ ಕಿಡಿಕಾರುತ್ತಿವೆ. ಆದರೆ, ಗಣಿಗಾರಿಕೆ ಮತ್ತು ನೈಸ್ ವಿಚಾರದಲ್ಲಿ ನಮ್ಮ ಸರ್ಕಾರ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಂಡಿದೆ ಎಂದರು.
ಜೆಡಿಎಸ್ ಧುರೀಣ ಎಚ್.ಡಿ.ಕುಮಾರಸ್ವಾಮಿ ಅವರು ಅಡ್ವೊಕೆಟ್ ಜನರಲ್ ಅಶೋಕ್ ಹಾರ್ನಳ್ಳಿ ಅವರ ವಿರುದ್ಧ ನೀಡಿರುವ ಹೇಳಿಕೆ ಅವರ ವ್ಯಕ್ತಿತ್ವಕ್ಕೆ ತಕ್ಕುದಾದುದಲ್ಲ. ಕುಮಾರಸ್ವಾಮಿ ಮಾತನಾಡುವ ಮುನ್ನ ಹತ್ತಾರು ಬಾರಿ ಯೋಚಿಸಬೇಕು ಎಂದು ಅವರು ತಿರುಗೇಟು ನೀಡಿದರು. ಪ್ರತಿಪಕ್ಷಗಳು ತಮ್ಮ ಜವಾಬ್ದಾರಿ ಮರೆತು ವರ್ತಿಸುತ್ತಿವೆ. ಅನಗತ್ಯ ವಿಚಾರಗಳ ಬಗ್ಗೆ ಹೋರಾಟ ನಡೆಸುತ್ತಿರುವುದು ಸರಿಯಲ್ಲ ಎಂದು ಹೇಳಿದರು.