ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್‌ನಲ್ಲಿ ಸಮಾಜವಾದಿ ಸಿದ್ದಾಂತ ಉಳಿದಿದೆ: ಪಟೇಲ್ (Congress | BJP | Mahima patel | vidhana parishath)
Bookmark and Share Feedback Print
 
ಸದ್ಯದ ರಾಜಕಾರಣದಲ್ಲಿ ಸಮಾಜವಾದಿ ಸಿದ್ಧಾಂತ ಉಳಿದುಕೊಂಡಿರುವುದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾಳಯಕ್ಕೆ ಸೇರಿಕೊಂಡಿದ್ದು ವಿಧಾನಪರಿಷತ್ ಚುನಾವಣೆಯ ಸ್ಪರ್ಧಾ ಕಣದಲ್ಲಿ ಉಳಿದುಕೊಂಡಿರುವುದಾಗಿ ಮಾಜಿ ಶಾಸಕ ಮಹಿಮಾ ಪಟೇಲ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನ ಚುನಾವಣೆಯಲ್ಲಿ ಹಣ ಮತ್ತು ತೋಳ್ಬಲವೇ ಪ್ರಮುಖವಾಗಿದೆ. ಕೆಲವು ಪಕ್ಷಗಳು ರಾಜಕೀಯ ಸಿದ್ದಾಂತಗಳನ್ನು ಗಾಳಿ ತೂರಿವೆ. ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಸಮಾಜವಾದಿ ಸಿದ್ದಾಂತ ಉಳಿದುಕೊಂಡಿದೆ ಎಂದರು.

ಮೇಲ್ಮನೆಗೆ ಆಯ್ಕೆಯಾಗುವುದು ಶ್ಲಾಘನೀಯ ವಿಚಾರ ಎಂದು ತಿಳಿಸಿದ ಪಟೇಲ್, ಮತದಾರರ ಮೇಲೆ ಸಂಪೂರ್ಣ ನಂಬಿಕೆ ಇದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ