ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಕ್ರಮ ಗಣಿ-ವಿಪಕ್ಷಗಳ ಟೀಕೆಗೆ ಕಿಮ್ಮತ್ತು ನೀಡಲ್ಲ: ಸಿಎಂ (BJP | Yeddyurappa | Congress | JDS | Karnataka)
Bookmark and Share Feedback Print
 
ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತಂತೆ ವಿಪಕ್ಷಗಳು ಮಾಡುತ್ತಿರುವ ಟೀಕೆಗಳ ವಿರುದ್ಧ ಕೆಂಡಾಮಂಡಲವಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷ ನಾಯಕರ ಆರೋಪಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅಧಿಕಾರದಲ್ಲಿ ಒಂದೇ ಒಂದು ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿದ್ದರೆ ಪ್ರತಿಪಕ್ಷಗಳು ಅದನ್ನು ಸಾಬೀತು ಮಾಡಲಿ ಎಂದು ಬಹಿರಂಗವಾಗಿ ಸವಾಲು ಹಾಕಿದರು. ಈ ಬಗ್ಗೆ ಸದನದಲ್ಲಿಯೇ ಚರ್ಚೆಯಾಗಲಿ ತಕ್ಕ ಉತ್ತರ ನೀಡುತ್ತೇನೆ ಎಂದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಪ್ರಕರಣವನ್ನು ಆಂಧ್ರಪ್ರದೇಶದ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿದೆ, ತನಿಖಾ ವರದಿ ಬರುವ ಮುನ್ನವೇ ವಿಪಕ್ಷ ನಾಯಕರುಗಳು ಬಾಯಿಗೆ ಬಂದಂತೆ ಮಾತನಾಡುತ್ತಿರುವುದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಅಕ್ರಮ ಗಣಿಗಾರಿಕೆಯಲ್ಲಿ ಮುಖ್ಯಮಂತ್ರಿಗಳ ಪಾಲೂ ಇದೆ ಎಂಬುದಾಗಿಯೂ ಪ್ರತಿಪಕ್ಷಗಳ ನಾಯಕರು ಆರೋಪ ಮಾಡುತ್ತಿರುವುದರ ಬಗ್ಗೆ ಕಿಡಿಕಾರಿದ ಅವರು, ಧರ್ಮಸಿಂಗ್ ಆಡಳಿತಾವಧಿಯಲ್ಲಿ ಗಣಿಗಾರಿಕೆಗಾಗಿ 44 ಹೊಸ ಲೈಸೆನ್ಸ್ ನೀಡಲಾಗಿತ್ತು, ಕುಮಾರಸ್ವಾಮಿ ಅವಧಿಯಲ್ಲಿ 47ಲೈಸೆನ್ಸ್ ನೀಡಲಾಗಿತ್ತು ಎಂದ ಅವರು, ಈ ಕುರಿತು ಅಧಿವೇಶನದಲ್ಲಿಯೇ ಚರ್ಚೆಯಾಗಲಿ ನಾನೂ ಸಿದ್ದ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ