ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವೈರಿಗಳ ಜತೆ ಯಾವತ್ತಿಗೂ ರಾಜಿಯಾಗಲಾರೆ: ಡಿಕೆಶಿ (Shivkumar | Congress | JDS | Kumaraswamy | Deve gowda)
Bookmark and Share Feedback Print
 
NRB
ಕಾಂಗ್ರೆಸ್ ಮತ್ತು ಜೆಡಿಎಸ್ ಹಾವು-ಮುಂಗುಸಿಯಂತಿದ್ದರೂ ಕೂಡ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಜೆಡಿಎಸ್ ಕೈ ಹಿಡಿದಿದೆ. ಆದರೆ ವೈರಿಗಳ ಜತೆ ದೋಸ್ತಿ ಎಂಬುದು ಇಲ್ಲವೇ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.!

ಇತ್ತೀಚೆಗಷ್ಟೇ ಮೈಸೂರಿನಲ್ಲಿ ನಡೆದ ಒಕ್ಕಲಿಗರ ಕಾರ್ಯಕ್ರಮವೊಂದರಲ್ಲಿ ಡಿಕೆಶಿ-ಎಚ್‌ಡಿಕೆ ಒಂದೇ ವೇದಿಕೆಯಲ್ಲಿ ಜತೆ-ಜತೆಯಾಗಿ ಕಾಣಿಸಿಕೊಂಡಿದ್ದರೂ ಸಹ, ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಜೊತೆ ದೋಸ್ತಿ ಬೇಡ ಎಂದು ಪಕ್ಷದ ಹೈಕಮಾಂಡ್‌ಗೆ ಸಾಕಷ್ಟು ಮಾಡಿದ್ದೆ, ಆದರೆ ಬಿಜೆಪಿಯ ದುರಾಡಳಿತವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿರುವುದಾಗಿ ಹೇಳಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಟ್ಟು ಕೊಡುವುದಾದರೆ ಮೈತ್ರಿಯೇ ಬೇಡ ಎಂದು ಹೈಕಮಾಂಡ್‌ಗೆ ಸ್ಪಷ್ಟವಾಗಿ ತಿಳಿಸಿದ್ದೆ ಎಂದರು.

ಬೆಂಗಳೂರು ಗ್ರಾಮಾಂತರದಲ್ಲಿ ನಡೆಯುತ್ತಿರುವ ವಿಧಾನಪರಿಷತ್ ಚುನಾವಣೆಯನ್ನು ನಾನು ನನ್ನ ಪ್ರತಿಷ್ಠೆಯನ್ನು ಅಡವಿಟ್ಟು ಹೋರಾಟಕ್ಕಿಳಿದಿದ್ದೇನೆ ಎಂದು ಈ ಸಂದರ್ಭದಲ್ಲಿ ವಿವರಿಸಿದರು. ಈವರೆಗೆ ಆಗಿರುವ ತಪ್ಪುಗಳಿಂದ ಸಾಕಷ್ಟು ಪಾಠ ಕಲಿತಿದ್ದು, ಈ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಿಸುವ ಮೂಲಕ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ