ಬಳ್ಳಾರಿ ನಗರದ ಸಮೀಪ ಇರುವ ಪ್ರಮುಖ ಗಣಿ ಉದ್ಯಮಿ ಎಸ್.ಕೆ.ಮೋದಿ ಅವರ ಕಚೇರಿ ಮೋದಿ ಭವನ, ಹಾಗೂ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪೆನಿ ಕಚೇರಿ ಮೇಲೆ ಗುರುವಾರ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಇಂದು ಮೋದಿ ಕಚೇರಿ ಮೇಲೆ ದಾಳಿ ನಡೆಸಿ, ವ್ಯವಹಾರ ಸಂಬಂಧ ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದೆ.
ಎಸ್.ಕೆ.ಮೋದಿ ಮಾಲೀಕತ್ವದಲ್ಲಿ ವಿಜಿಎಂ ಹಾಗೂ ಸಿಐಓಪಿ ಮೈನಿಂಗ್ ಕಂಪನಿ ಗಣಿಗಾರಿಕೆ ನಡೆಸುತ್ತಿದೆ. ಇದರಲ್ಲಿ ವಿಜಿಎಂ ಕರ್ನಾಟಕದಲ್ಲಿ ಹಾಗೂ ಸಿಐಓಪಿ ಆಂಧ್ರಪ್ರದೇಶದಲ್ಲಿ ಗಣಿಗಾರಿಕೆ ನಡೆಸುತ್ತಿದೆ.
ಬಳ್ಳಾರಿಯ ಹಾವಂಬಾವಿ ಸಮೀಪ ಇರುವ ಓಬಳಾಪುಂರ ಮೈನಿಂಗ್ ಕಂಪನಿ ಕಚೇರಿ ಮೇಲೂ ದಾಳಿ ನಡೆಸಿರುವ ಸಿಬಿಐ ಅಧಿಕಾರಿಗಳು ಮಹತ್ವದ ದಾಖಲೆ ಪ್ತರ ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಾಜ್ಯ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಆಂಧ್ರಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಪ್ರಕರಣದ ತನಿಖೆಯನ್ನು ಆಂಧ್ರ ಸರ್ಕಾರ ಸಿಬಿಐಗೆ ವಹಿಸಿತ್ತು. ಆ ನಿಟ್ಟಿನಲ್ಲಿ ಸಿಬಿಐ ಅಧಿಕಾರಿಗಳು ಕೆಲ ದಿನಗಳಿಂದ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು ಕರ್ನಾಟದಲ್ಲಿಯೂ ತನಿಖೆ ನಡೆಸುತ್ತಿದ್ದಾರೆ.