ನಂದಿ ಇನ್‌ಫ್ರಾಸ್ಟ್ರಕ್ಟರ್ ಕಾರಿಡಾರ್ ಎಂಟರ್‌ಪ್ರೈಸಸ್ (ನೈಸ್) ದೊಡ್ಡ ತೋಗೂರಿನ ಭೂಸ್ವಾಧೀನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗಾಗಿ ಬೆಂಗಳೂರು ಪೂರ್ವ ತಾಲೂಕಿನ ದೊಡ್ಡ ತೋಗೂರಿನ ಬಾಬು ರೆಡ್ಡಿ ಎಂಬುವರ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ ಬಾಬು ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಜಿತ್ ಗುಂಜಾಳ್ ಅವರು, ನೈಸ್‌ಗೆ ನೋಟಿಸ್ ಜಾರಿ ಮಾಡಿದ್ದಾರೆ. 2003ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು. ಅದನ್ನು ಪ್ರಶ್ನಿಸಿ ತಾವು ಸಲ್ಲಿಸಿದ್ದ ಆಕ್ಷೇಪಣೆಯನ್ನು ಕೆಐಎಡಿಬಿ ಬಲವಂತದಿಂದ ವಿಲೇವಾರಿ ಮಾಡಿತ್ತು ಎಂದು ಅರ್ಜಿದಾರರು ದೂರಿದ್ದಾರೆ.