ಮಹಾದಾಯಿ ಯೋಜನೆಗೆ ನ್ಯಾಯಾಧೀಕರಣ ರಚನೆ ಮಾಡುವ ಮೂಲಕ ಕೇಂದ್ರ ಸರ್ಕಾರ ಆತುರದ ಕ್ರಮ ಅನುಸರಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದು, ಯೋಜನೆಗೆ ನ್ಯಾಯಾಧೀಕರಣ ರಚಿಸಿರುವ ಬಗ್ಗೆ ರಾಜ್ಯ ಅಪಸ್ವರ ಎತ್ತಿರುವುದು ಸರಿಯಲ್ಲ ಎಂದು ಕೇಂದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ ಸಮಜಾಯಿಸಿ ನೀಡಿದ್ದಾರೆ.
ನಗರದಲ್ಲಿ ಶನಿವಾರ ನಡೆದ ಸಂಧಾನ ಮತ್ತು ಮಧ್ಯಸ್ಥಿಕೆ ಕುರಿತ ಸಮಾವೇಶಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಕೇಂದ್ರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಮಹದಾಯಿ ಯೋಜನೆಗೆ ನ್ಯಾಯಾಧೀಕರಣ ರಚನೆ ಮಾಡಿ ಕೇಂದ್ರ ಸರ್ಕಾರ ಆತುರದ ಕ್ರಮ ಅನುಸರಿಸದೆ, ಕೇಂದ್ರ ಸರ್ಕಾರ ಗೋವಾ ಸರ್ಕಾರದ ಒತ್ತಡಕ್ಕೆ ಮಣಿದಿದೆ ಎಂದು ದೂರಿದರು.
ಸುಪ್ರೀಂಕೋರ್ಟ್ ತೀರ್ಪು ಬರುವ ಮುನ್ನವೇ ನ್ಯಾಯಾಧೀಕರಣ ರಚನೆ ಮಾಡಿರುವುದು ಸರಿಯಲ್ಲ ಎಂದರು. ಅಕ್ರಮ ಗಣಿಗಾರಿಕೆ ಕುರಿತಂತೆ ಸಿಬಿಐ ತನಿಖೆಯಿಂದ ಸರ್ಕಾರಕ್ಕೆ ಯಾವುದೇ ಮುಜುಗರವಾಗಿಲ್ಲ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.