ಪ್ರತ್ಯೇಕ ತೆಲಂಗಾಣ ರಾಜ್ಯ ಸ್ಥಾಪನೆಗೆ ಕೇಂದ್ರ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಪ್ರತ್ಯೇಕ ಕೊಡಗು ರಾಜ್ಯ ರಚನೆಯ ಕೂಗಿಗೆ ಮರುಜೀವ ಬಂದಿದೆ.
ವಿಶ್ವ ಅಲ್ಪಸಂಖ್ಯಾತರ ದಿನಾಚರಣೆ ಅಂಗವಾಗಿ ಡಿಸೆಂಬರ್ 18ರಂದು ದೆಹಲಿಯಲ್ಲಿರುವ ವಿಶ್ವಸಂಸ್ಥೆಯ ಕಚೇರಿಯ ಮುಂದೆ ತಮ್ಮ ಸಂಘಟನೆಯ ಕಾರ್ಯಕರ್ತರು ತಮ್ಮ ಹಕ್ಕೊತ್ತಾಯಕ್ಕಾಗಿ ಧರಣಿ ನಡೆಸಲಿದ್ದಾರೆ ಎಂದು ಕೊಡವ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಎನ್.ಯು. ನಾಚಪ್ಪ ಪುನರುಚ್ಚರಿಸಿದ್ದಾರೆ.
ಕೊಡಗು ಜಿಲ್ಲೆಗೆ ಸ್ವಾಯತ್ತ ಸ್ಥಾನಮಾನ ನೀಡುವುದರಿಂದ ಕೊಡವ ಸಮುದಾಯದ ವಿಶಿಷ್ಟ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ವಿಶ್ವಸಂಸ್ಥೆ ಚಿಂತನೆಯಂತೆ ಅಲ್ಪಸಂಖ್ಯಾತ ಕೊಡವ ಸಮುದಾಯ ವಿಶೇಷ ಸ್ಥಾನ ಮಾನ ಪಡೆಯಲು ಎಲ್ಲಾ ಅರ್ಹತೆ ಹೊಂದಿದೆ ಎಂದು ನಾಚಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ. ಎಷ್ಟು ವರ್ಷವಾದರೂ ಆಗಲಿ ತಮ್ಮ ಗುರಿ ಮುಟ್ಟುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದರು.