ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕನ್ನಡ ಗೊತ್ತಿರುವವರಿಗೆ ಮಾತ್ರ ಟಿಕೆಟ್ ಕೊಡಿ: ಮುಖ್ಯಮಂತ್ರಿ ಚಂದ್ರು (BJP | BBMP | Election | Congress | JDS | Mukhya Mantri Chandru)
ಕನ್ನಡ ಗೊತ್ತಿರುವವರಿಗೆ ಮಾತ್ರ ಟಿಕೆಟ್ ಕೊಡಿ: ಮುಖ್ಯಮಂತ್ರಿ ಚಂದ್ರು
ಬೆಂಗಳೂರು, ಮಂಗಳವಾರ, 15 ಡಿಸೆಂಬರ್ 2009( 19:42 IST )
WD
ಮುಂಬರುವ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯಲ್ಲಿ ಕನ್ನಡ ತಿಳಿದಿರುವ, ಕನ್ನಡದ ಬಗ್ಗೆ ಬದ್ಧತೆ ಇರುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡುವಂತೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.
ರಾಜ್ಯದ ರಾಜಧಾನಿಯಲ್ಲೇ ನಮ್ಮ ಭಾಷೆಯನ್ನೇ ಕಡೆಗಣಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡದ ಪಾಂಡಿತ್ಯವನ್ನು ಪಡೆದ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡುವಂತೆ ಪ್ರತಿಯೊಂದು ರಾಜಕೀಯ ಪಕ್ಷಗಳ ಮುಖಂಡರಿಗೆ ಆಗ್ರಹಿಸಿ ಪತ್ರ ಬರೆದಿದ್ದೇನೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಎಲ್ಲಾ ಪಕ್ಷಗಳ ರಾಜ್ಯಾಧ್ಯಕ್ಷರು, ಸದಸ್ಯರು, ಸಚಿವರು ಹಾಗೂ ಶಾಸಕರುಗಳಿಗೆ ತಾವು ಪತ್ರ ಬರೆದು, ಕನ್ನಡ ನಾಡು-ನುಡಿ, ನೆಲ-ಜಲದ ಬಗೆಗೆ ಬದ್ಧತೆ ಇರುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವಂತೆ ತಿಳಿಸಿದ್ದೇನೆ ಎಂದು ಅವರು ವಿವರಿಸಿದರು.