ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » 'ಪ್ರತ್ಯೇಕ ಕಲ್ಯಾಣ ಕರ್ನಾಟಕ' ರಾಜ್ಯ ಬೇಕು! (kodagu | Bidar | karnataka | Bangalore)
Bookmark and Share Feedback Print
 
ಪ್ರತ್ಯೇಕ ತೆಲಂಗಾಣ ರಾಜ್ಯ ಬೇಡಿಕೆಯ ನಂತರ ಕೊಡಗು ಸಹ ಪ್ರತ್ಯೇಕ ರಾಜ್ಯವಾಗಬೇಕೆಂಬ ಕೂಗು ಕೇಳಿದ ನಡುವೆಯೇ, ಇದೀಗ ಗುಲ್ಬರ್ಗಾ, ಬೀದರ್, ರಾಯಚೂರು, ಕೊಪ್ಪಳವನ್ನು ಒಂದುಗೂಡಿಸಿ 'ಪ್ರತ್ಯೇಕ ಕಲ್ಯಾಣ ಕರ್ನಾಟಕ' ರಾಜ್ಯವನ್ನಾಗಿ ಮಾಡಬೇಕೆಂದು ಕಲ್ಯಾಣ ಕರ್ನಾಟಕ ಸಂಘ ಒತ್ತಾಯಿಸಿದೆ.

ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದ ಕಲ್ಯಾಣ ಕರ್ನಾಟಕ ಸಂಘದ ಕಾರ್ಯಕರ್ತರು ಗುಲ್ಬರ್ಗಾ, ಬೀದರ್, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳು ತುಂಬಾ ಹಿಂದುಳಿದ ಜಿಲ್ಲೆಗಳಾಗಿದ್ದು, ಈ ನಾಲ್ಕು ಜಿಲ್ಲೆಗಳನ್ನು ಒಟ್ಟುಗೂಡಿಸಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯವನ್ನಾಗಿ ಮಾಡಬೇಕೆಂದು ಸಂಘ ಒತ್ತಾಯಿಸಿದೆ.

ಅಧಿಕಾರಕ್ಕೆ ಬಂದ ಸರ್ಕಾರಗಳು ಮೊದಲಿನಿಂದಲೂ ಈ ಭಾಗದ ಅಭಿವೃದ್ದಿಯನ್ನು ನಿರ್ಲಕ್ಷಿಸಿವೆ ಅಲ್ಲದೆ ಈ ಭಾಗಗಳೆಲ್ಲವೂ ರಾಜಧಾನಿ ಬೆಂಗಳೂರಿನಿಂದ ಬಹಳ ದೂರವಿರುವ ಕಾರಣ ಪ್ರತ್ಯೇಕ ಮಾಡಬೇಕೆಂಬ ವಾದಗಳು ಕೇಳಿ ಬರುತ್ತಿವೆ.
ಸಂಬಂಧಿತ ಮಾಹಿತಿ ಹುಡುಕಿ