ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸರ್ಕಾರ ಉರುಳಿಸೋದು ಕಾಂಗ್ರೆಸ್‌ಗೆ ಬಿಟ್ಟಿದ್ದು: ದೇವೇಗೌಡ (Deve gowda | Congress | JDS | Yeddyurappa | BJP)
Bookmark and Share Feedback Print
 
PTI
'ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಉರುಳಿಸೋದು ಕಾಂಗ್ರೆಸ್‌ಗೆ ಬಿಟ್ಟಿದ್ದು, ಹಾಗೇ ಸರ್ಕಾರವನ್ನು ಉಳಿಸಿಕೊಳ್ಳೋದು ಬಿಜೆಪಿಯವರಿಗೆ ಬಿಟ್ಟಿದ್ದು' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಗುರುವಾರ ರಾಜ್ಯರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತು ಖಾಸಗಿ ವಾಹಿನಿ ಟಿವಿ9 ಜೊತೆ ಮಾತನಾಡಿದ ಗೌಡರು, ಬಿಜೆಪಿ ಅತೃಪ್ತ ಶಾಸಕರಿಂದ ಆಡಳಿತಾರೂಢ ಬಿಜೆಪಿ ಸರ್ಕಾರ ಪತನಗೊಂಡರೆ ಅದರ ಲಾಭವನ್ನು ಕಾಂಗ್ರೆಸ್ ಪಡೆದುಕೊಳ್ಳಬೇಕು. ಯಾಕೆಂದರೆ ನಮ್ಮದು ಸಣ್ಣ ಪಕ್ಷ 27ಮಂದಿ ಶಾಸಕರನ್ನು ಹೊಂದಿದೆ ಅಷ್ಟೇ. ಒಂದು ವೇಳೆ ಕಾಂಗ್ರೆಸ್ ಸರ್ಕಾರ ರಚಿಸಲು ಮುಂದಾದರೆ ಅದಕ್ಕೆ ಜೆಡಿಎಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.

ನಾನು ನನ್ನ 53ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಸರ್ಕಾರವನ್ನು ಎಲ್ಲೂ ಕಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ಮಾತಿನುದ್ದಕ್ಕೂ ಮುಖ್ಯಮಂತ್ರಿ ಬಿಎಸ್‌ವೈ ವಿರುದ್ಧ ವಾಗ್ದಾಳಿ ನಡೆಸಿದರು.

ಸರ್ಕಾರ ಪತನವಾಗುತ್ತೇ ಅಂತೀರಾ ಎಂಬ ಪ್ರಶ್ನೆಗೆ, ಜೋರಾಗಿ ನಕ್ಕ ಗೌಡರು ಅದನ್ನು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‌ಗೆ ಬಿಟ್ಟಿದ್ದು, ಸರ್ಕಾರ ಉರುಳಿಸೋದು ಅವರು, ಉಳಿಸಿಕೊಳ್ಳೋದು ಬಿಜೆಪಿಗೆ ಬಿಟ್ಟಿದ್ದು ಎಂದು ಮಾರ್ಮಿಕವಾಗಿ ನುಡಿದು ಮತ್ತೆ ನಗುವ ಮೂಲಕ ಅಚ್ಚರಿ ಮೂಡಿಸಿದರು.

ಅಲ್ಲದೇ ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಾಗಿರುವುದರಿಂದ ಅಲ್ಲಿ ಬಹಳಷ್ಟು ಮಂದಿ ಸಮರ್ಥರಿದ್ದಾರೆ. ಹಾಗಾಗಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ಯಾರನ್ನು ಆಯ್ಕೆ ಮಾಡುತ್ತೇ ಅವರಿಗೆ ನಾವು ಬೆಂಬಲ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ನೇತೃತ್ವದ ಗುಂಪೊಂದು ಸಚಿವಸ್ಥಾನ ನೀಡಬೇಕೆಂದು ಪಟ್ಟು ಹಿಡಿದು ರಹಸ್ಯ ಸಭೆ ನಡೆಸುತ್ತಿದೆ. ಇದೀಗ ಬಿಜೆಪಿಯಲ್ಲಿ ಬಿಕ್ಕಟ್ಟು ಉಲ್ಭಣಿಸುವ ಎಲ್ಲಾ ಲಕ್ಷಣ ಕಾಣಿಸುತ್ತಿದೆ. ಆ ನಿಟ್ಟಿನಲ್ಲಿ ಒಂದು ವೇಳೆ ಬಿಜೆಪಿ ಸರ್ಕಾರ ಪತನಗೊಂಡರೆ ಅದರ ಲಾಭವನ್ನು ಕಾಂಗ್ರೆಸ್ ಪಡೆದುಕೊಳ್ಳಬೇಕು ಎಂದು ಬುಧವಾರವಷ್ಟೇ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಸಲಹೆ ನೀಡಿದ್ದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೂ ಕೂಡ ಬಿಜೆಪಿಯ ಹಲವು ಅತೃಪ್ತ ಶಾಸಕರು ರಹಸ್ಯವಾಗಿ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ರಾಜ್ಯರಾಜಕಾರಣದಲ್ಲಿ ಮಹತ್ವದ ಬದಲಾವಣೆ ಮಾಡಲು ವಿಪಕ್ಷಗಳು ತಂತ್ರ ಹೂಡುತ್ತಿರುವ ಬಗ್ಗೆ ರಾಜಕೀಯ ಪಡಸಾಲೆಯಲ್ಲಿ ಕುತೂಹಲ ಕೆರಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ