ಕಾಂಗ್ರೆಸ್‌ಗೆ ಜೆಡಿಎಸ್ ಜೊತೆ ಮೈತ್ರಿ ಸರ್ಕಾರ ರಚಿಸುವ ಇರಾದೆ ಇಲ್ಲ. ಅದೆಲ್ಲ ಗಾಳಿಮಾತು ಎಂದು ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಜೆಡಿಎಸ್ ಜೊತೆ ಸರ್ಕಾರ ರಚಿಸಲು ಈ ಹಿಂದೆ ಸಾಕಷ್ಟು ಅವಕಾಶವಿದ್ದಾಗ್ಯೂ ಅಂತಹ ಅನೈತಿಕ ಮೈತ್ರಿ ಆಸೆಯನ್ನು ಕಾಂಗ್ರೆಸ್ ಹೊಂದಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬಿಜೆಪಿ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲು ಈಗಿನ ಮೇಲ್ಮನೆ ಸೇರಿದಂತೆ ಈ ಹಿಂದಿನ ಚುನಾವಣೆಗಳಲ್ಲಿ ವರಿಷ್ಠರ ನಿರ್ದೇಶನದಂತೆ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಆದರೆ ಈ ಮೈತ್ರಿ ಶಾಶ್ವತವಲ್ಲ ಎಂಬುದನ್ನು ವರಿಷ್ಠರೇ ಸ್ಪಷ್ಟಪಡಿಸಿದ್ದಾರೆ ಎಂದರು.
ಅಕ್ರಮ ಗಣಿಗಾರಿಕೆಗೆ ಆಡಳಿತಾರೂಢ ಸರ್ಕಾರ ಕುಮ್ಮಕ್ಕು ಕೊಡುತ್ತಿದೆ. ಅದೇ ಕಾಂಗ್ರೆಸ್ ಸರ್ಕಾರವಿದ್ದಿದ್ದರೆ ಮುಲಾಜಿಲ್ಲದೆ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ಒಪ್ಪಿಸುತ್ತಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.