'ವಿಧಾನಸಭೆ ವಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಆಶಯ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಎಚ್.ಡಿ.ರೇವಣ್ಣ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಹೊಳೆನರಸೀಪುರದ ಪಡುವಲಹಿಪ್ಪೆಯಲ್ಲಿ ಶುಕ್ರವಾರ ವಿಧಾನಪರಿಷತ್ ಚುನಾವಣೆಯ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಮಾಡಿದರೆ ಅದಕ್ಕೆ ತಮ್ಮ ಅಭ್ಯಂತರವೇನೂ ಇಲ್ಲ ಎಂದು ಪುನರುಚ್ಚರಿಸಿದ್ದಾರೆ.
ಬಿಜೆಪಿ ಪಕ್ಷದೊಳಗಿನ ಆಂತರಿಕ ಕಚ್ಚಾಟವೇ ಸರ್ಕಾರದ ಪತನಕ್ಕೆ ಕಾರಣವಾಗಲಿದೆ. ಸರ್ಕಾರ ಉರುಳಿಸುವ ಬಗ್ಗೆ ನಾನು ಕಾಂಗ್ರೆಸ್ ನಾಯಕರ ಜೊತೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.
ಒಂದು ವೇಳೆ ಬಿಜೆಪಿ ಸರ್ಕಾರ ಪತನಗೊಂಡರೆ ಆಗ ಕಾಂಗ್ರೆಸ್ ಸರ್ಕಾರ ರಚಿಸಲು ಮುಂದಾದರೆ ಜೆಡಿಎಸ್ ಬೆಂಬಲ ನೀಡಲಿದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೇಳಿಕೆಗೆ ತಾನು ಕೂಡ ಬದ್ಧ ಎಂದರು.