ಕುತಂತ್ರ ಮಾಡಿ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರ ಉರುಳಿಸಿ ಅಧಿಕಾರಕ್ಕೆ ಬರುವಂತ ಪಾಪದ ಕೆಲಸವನ್ನು ಕಾಂಗ್ರೆಸ್ ಮಾಡುವುದಿಲ್ಲ ಎಂದು ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್‌ಗೆ ರಾಷ್ಟ್ರಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಉತ್ತಮ ಅಭಿಪ್ರಾಯವಿದೆ. ಅದನ್ನು ಬಳಸಿಕೊಂಡು ಮುಂಬರುವ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತೆವೆಯೇ ಹೊರತು ಕುತಂತ್ರ ರಾಜಕಾರಣ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಜನನಗರ ಬಂಟರ ಸಂಘದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಯುವ ಬಂಟರ ರಾಷ್ಟ್ರೀಯ ಭಾವೈಕ್ಯ ಸಮಾರಂಭದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಅವರ ತಪ್ಪಿನಿಂದಾಗಿಯೇ ಸರ್ಕಾರವನ್ನು ಕೆಡವಿಕೊಳ್ಳುತ್ತಾರೆ. ಹೀಗಿರುವಾಗ ಕಾಂಗ್ರೆಸ್ ಕುತಂತ್ರ ಮಾಡಿ ಅಧಿಕಾರ ಹಿಡಿಯುವಂತ ಅವಸರದ ಕೆಲಸ ಮಾಡುವುದಿಲ್ಲ ಎಂದರು.
ರಾಜ್ಯ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ದಿನಕರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ವಾಗ್ದಂಡನೆ ವಿಧಿಸಲು ಮಹಾಭಿಯೋಗಕ್ಕೆ ಮುಂದಾಗಿದೆ. ಈ ಬಗ್ಗೆ ಸುಪ್ರೀಕೋರ್ಟ್ ಸಮಿತಿ ರಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಅಲ್ಲಿಯವರೆಗೆ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.