ರಾಜ್ಯದಲ್ಲಿ ಹೊಸ ಮೈತ್ರಿ ಸರ್ಕಾರ ರಚಿಸುವ ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ಶತಾಯ ಗತಾಯ ಪ್ರಯತ್ನ ಕೇವಲ 'ಹಗಲುಗನಸು' ಎಂದು ಮಾಜಿ ಸಚಿವೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.
ಐದು ವರ್ಷಗಳ ಕಾಲ ಬಿ.ಎಸ್.ಯಡಿಯೂರಪ್ಪ ಸಿಎಂ ಪಟ್ಟದಲ್ಲಿ ಮುಂದುವರಿಯಲಿದ್ದಾರೆ ಎಂದ ಅವರು, ಬಿಜೆಪಿ ಸರ್ಕಾರ ಸುಭದ್ರವಾಗಿದೆ ವಿಶ್ವಾಸ ವ್ಯಕ್ತ ಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ, ಅಧಿಕಾರ ಕಳೆದುಕೊಂಡು ಪ್ರತಿ ಪಕ್ಷ ಸ್ಥಾನದಲ್ಲಿ ಕೂತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸ್ಥಿತಿ ನೀರಿನಿಂದ ಹೊರತೆಗೆದ ಮೀನಿನಂತಾಗಿದೆ ಎಂದು ಟೀಕಿಸಿದರು. ಬಿಜೆಪಿ ಸರ್ಕಾರವನ್ನು ಕೆಳಗಿಳಿಸಿ ಹೊಸ ಮೈತ್ರಿ ಸರ್ಕಾರ ರಚಿಸುವ ಕಾಂಗ್ರೆಸ್ ಮತ್ತು ಜೆಡಿಎಸ್ ಕನಸು ಈಡೇರದು ಎಂದರು.