ಮೇಲ್ಮನೆ ಚುನಾವಣೆಯ ಮತದಾನ ಸಂದರ್ಭದಲ್ಲಿ ನಡೆದ ಘರ್ಷಣೆ ವೇಳೆ ಅವಾಚ್ಯ ಶಬ್ದಗಳಿಂದ ಬೈದಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಸಿ.ಟಿ.ರವಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಶುಕ್ರವಾರ ಸಿಂಧಿಗೆರೆಯಲ್ಲಿ ವಿಧಾನಪರಿಷತ್ ಚುನಾವಣೆಯ ಮತದಾನದ ವೇಳೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಈ ಸಂದರ್ಭದಲ್ಲಿ ಆಗಮಿಸಿದ್ದ ಶಾಸಕ ಸಿ.ಟಿ.ರವಿ ಅವರು ಗಂಗಬೀರಯ್ಯ ಎಂಬವರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದರು.
ತನ್ನನ್ನು ಜಾತಿನಿಂದನೆಗೆ ಗುರಿಪಡಿಸಿರುವುದಾಗಿ ಆರೋಪಿಸಿ ಗಂಗಬೀರಯ್ಯ ಶನಿವಾರ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಶಾಸಕ ಸಿ.ಟಿ.ರವಿ ವಿರುದ್ಧ ದೂರನ್ನು ದಾಖಲಿಸಿದ್ದಾರೆ.