ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸರ್ಕಾರ ಉರುಳಿಸಲು ಜೆಡಿಎಸ್ ಜತೆ 'ಕೈ' ಜೋಡಿಸಲ್ಲ (JDS | Congress | Karnataka | BJP | Siddaramaiah)
Bookmark and Share Feedback Print
 
NRB
ಪ್ರಸಕ್ತ ಸನ್ನಿವೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಉರುಳಿಸಲು ಜೆಡಿಎಸ್ ನಾಯಕರ ಜೊತೆ ಕೈಜೋಡಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ರಚನೆಗೆ ಜೆಡಿಎಸ್ ನಾಯಕರು ಪ್ರಯತ್ನ ನಡೆಸಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಪ್ರಮುಖ ಶಾಸಕರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಒಂದು ವೇಳೆ ಬಿಜೆಪಿಯೊಳಗಿನ ಬಿಕ್ಕಟ್ಟಿನಿಂದಾಗಿಯೇ ರಾಜ್ಯ ಸರ್ಕಾರ ಪತನಗೊಂಡರೆ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆ ಮಾಡುವ ನಿರ್ಧಾರವನ್ನು ಹೈಕಮಾಂಡ್‌ಗೆ ಬಿಡಲು ಸಭೆ ತೀರ್ಮಾನಿಸಿದೆ.

ಬಿಜೆಪಿಯ ಹೊನ್ನಾಳಿ ಶಾಸಕ ರೇಣುಕಾಚಾರ್ಯ ನೇತೃತ್ವದಲ್ಲಿ ಒಂದು ಬಣ ಅಸಮಾಧಾನ ಹೊಂದಿದ್ದು, ಆ ನಿಟ್ಟಿನಲ್ಲಿ ಅತೃಪ್ತ ಶಾಸಕರು ರಾಜೀನಾಮೆ ನೀಡುವಂತೆ ಮಾಡುವ ಮೂಲಕ ಸರ್ಕಾರವನ್ನು ಉರುಳಿಸುವ ಪ್ರಯತ್ನವನ್ನು ಜೆಡಿಎಸ್ ಮುಖಂಡರು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕಾಂಗ್ರೆಸ್ ನಾಯಕರು ಯಾವ ನಿಲುವ ಕೈಗೊಳ್ಳಬೇಕು ಎಂಬ ಬಗ್ಗೆ ತೀರ್ಮಾನಿಸಲು ಸಿದ್ದರಾಮಯ್ಯ ನೇತೃತ್ವದಲ್ಲಿ ದಿಢೀರ್ ಮಾತುಕತೆ ನಡೆದಿತ್ತು.
ಸಂಬಂಧಿತ ಮಾಹಿತಿ ಹುಡುಕಿ