ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮೈತ್ರಿ ಮಾಡಿಕೊಂಡ್ರೂ ಏನೂ ಮಾಡಲಾಗಿಲ್ಲ: ಸಿಎಂ ತಿರುಗೇಟು (BJP | Congress | Yeddyurappa | JDS | Vidhana parishath)
Bookmark and Share Feedback Print
 
NRB
ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಸರ್ಕಾರಕ್ಕೆ ಮುಖಭಂಗ ಮಾಡಬೇಕೆಂದು ನಿರ್ಧರಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡರು ಕೂಡ ನಮ್ಮನ್ನು ಏನೂ ಮಾಡಲಾಗಲಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಸೋಮವಾರ ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಘೋಷಣೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು 12ಸ್ಥಾನಗಳಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಹತ್ತು ಸ್ಥಾನಗಳಲ್ಲಿ ಜಯಸಾಧಿಸಿರುವುದು ಸಂತಸ ತಂದಿದೆ ಎಂದರು. ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಬಿಜೆಪಿ ಗೆಲುವು ಸಾಧಿಸುವ ನಂಬಿಕೆ ಇತ್ತು. ಆದರೆ ಅದು ಸಾಧ್ಯವಾಗಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.

ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಅನಾವಶ್ಯಕವಾಗಿ ಟೀಕಿಸಿ, ಪಕ್ಷದ ವರ್ಚಸ್ಸಿಗೆ ಧಕ್ಕೆ ತರಬೇಕೆಂದು ಕಾಂಗ್ರೆಸ್-ಜೆಡಿಎಸ್ ಒಂದುಗೂಡಿದರು ನಮ್ಮ ಗೆಲುವಿನ ಓಟಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ ಎಂದು ವ್ಯಂಗ್ಯವಾಡಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸದಸ್ಯರು ಹೆಚ್ಚಿಲ್ಲ, ಆದರೂ ಹತ್ತು ಸ್ಥಾನಗಳಲ್ಲಿ ಜಯ ಸಾಧಿಸಿರುವುದು ನಮ್ಮ ಸಾಧನೆ ಎಂದು ಬಣ್ಣಿಸಿದರು. ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಸಂಬಂಧಿತ ಮಾಹಿತಿ ಹುಡುಕಿ