ಮೇಲ್ಮನೆ ಚುನಾವಣೆ ಫಲಿತಾಂಶ ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಕರೆಗಂಟೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.
ವಿಧಾನಪರಿಷತ್‌ನ 25ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಸೋಮವಾರ ಘೋಷಣೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಮತ್ತು ಹೈಜಾಕ್ ಮೂಲಕ ಅಧಿಕಾರವನ್ನು ಪಡೆಯಬಹುದೆಂಬ ಬಿಜೆಪಿ ತಂತ್ರಗಳಿಗೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ತಕ್ಕಪಾಠ ಕಲಿಸಿದ್ದಾರೆ ಎಂದರು.
ಮೇಲ್ಮನೆ ಚುನಾವಣೆ ಫಲಿತಾಂಶ ಬಿಜೆಪಿ ಸರ್ಕಾರದ ಪತನದ ದಿಕ್ಸೂಚಿ ಎಂದು ಅವರು ವಾಗ್ದಾಳಿ ನಡೆಸಿದರು. ಗಣಿಧಣಿಗಳಿಂದ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅಲ್ಲದೇ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಎರಡೂ ಪಕ್ಷಗಳಿಗೂ ಲಾಭವಾಗಿದೆ ಎಂದ ಅವರು, ಮೈತ್ರಿಯನ್ನು ಮುಂದುವರಿಸುವುದು ಪಕ್ಷದ ವರಿಷ್ಠರಾದ ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಗೆ ಬಿಟ್ಟಿದ್ದು ಎಂದು ಹೇಳಿದರು.