ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಅವ್ಯವಹಾರಗಳು ನಡೆದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ.
ಉದ್ಯೋಗ ಖಾತರಿ ಯೋಜನೆ ಅತ್ಯುತ್ತಮ ಯೋಜನೆಯಾಗಿದ್ದು, ಉತ್ತಮ ಕೆಲಸಗಳೊಂದಿಗೆ ಬಡವರಿಗೆ ಸಹಾಯಕವಾಗುತ್ತದೆ. ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದ್ದು, ಅನುದಾನಗಳನ್ನು ಬಳಸಿಕೊಳ್ಳಲಾಗಿದೆ ಎಂದರು.
ಈ ಯೋಜನೆಯಲ್ಲಿ ಸಣ್ಣಪುಟ್ಟ ಲೋಪದೋಷಗಳು ಆಗಿರಬಹುದು. ಈ ಯೋಜನೆಯ ಹಣವನ್ನು ದುರುಪಯೋಗ ಮಾಡಿಕೊಂಡ ಅಧಿಕಾರಿಗಳು ಹಾಗೂ ಎನ್‌ಜಿಓಗಳ ವಿರುದ್ಧ ಕ್ರಮಕೈಗೊಳ್ಳುವುದಾಗಿ ಜಗದೀಶ್ ಶೆಟ್ಟರ್ ಹೇಳಿದರು.