ರಾಜ್ಯದಲ್ಲಿ ಸರ್ಕಾರಿ ಹಾಗೂ ಆಡಳಿತ ಮಂಡಳಿ ಖೋಟಾದಡಿ ಒಟ್ಟು ಈ ವರ್ಷ 11,700 ಇಂಜಿನಿಯರ್ ಸೀಟುಗಳು ಭರ್ತಿಯಾಗದೆ ಖಾಲಿ ಉಳಿದಿವೆ ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಸೀಟುಗಳು ಈಗಾಗಲೇ ಖಾಲಿ ಇರುವುದರಿಂದ ಹೊಸ ಕಾಲೇಜುಗಳನ್ನು ಆರಂಭಿಸಿದರೆ ಪ್ರವೇಶಾತಿ ಆಗುದಿಲ್ಲ ಎನ್ನುವ ಕಾರಣಕ್ಕೆ ಹೊಸ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸುವ ಬದಲು ಈಗಿರುವ ಕಾಲೇಜುಗಳಿಗೆ ಹೆಚ್ಚಿನ ಸೌಲಭ್ಯ ಒದಗಿಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಏನಾದರೂ ಹೊಸ ಕಾಲೇಜು ಆರಂಭಿಸಿದರೆ ತಾಂತ್ರಿಕ ಕಾಲೇಜಿನ ಅಭಾವವಿರುವ ಲಿಂಗಸೂರಿನಲ್ಲಿ ಆರಂಭಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಅರವಿಂದ ಲಿಂಬಾವಳಿ ತಿಳಿಸಿದರು.