ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರೈತರ ಮೇಲೆ ಲಾಠಿ ಪ್ರಹಾರ ನಡೆಸ್ಬೇಡಿ: ಸಿಎಂ (BJP | Yeddyurappa | Congress | JDS | Mysore)
Bookmark and Share Feedback Print
 
ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಪ್ರತಿಭಟನೆ ನಡೆಸುವ ರೈತರ ಮೇಲೆ ಲಾಠಿ ಪ್ರಹಾರ ನಡೆಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.

ಬುಧವಾರ ವಿಧಾನಮಂಡಲ ಕಲಾಪದಲ್ಲಿ ಮಾತಾನಾಡಿದ ಅವರು, ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಕುರಿತು ರೈತರ ಮುಖಂಡರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ರೈತರ ಮೇಲಿನ ದೌರ್ಜನ್ಯಕ್ಕೆ ಕಾರಣರಾದ ಚಾಮರಾಜನಗರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಮತ್ತು ಈ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂಬ ಬೇಡಿಕೆಗೆ ಮಣಿಯದ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಕಾಂಗ್ರೆಸ್ ಶಾಸಕರು ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭಾತ್ಯಾಗ ನಡೆಸಿದರು.

ಇದರಿಂದ ಆಕ್ರೋಶಗೊಂಡ ಮುಖ್ಯಮಂತ್ರಿಗಳು, ರೈತರ ಬೇಡಿಕೆಗಳನ್ನು ಈಡೇರಿಸಲು ನಾವು ಸಿದ್ಧ. ಆದರೆ ಅನಾವಶ್ಯಕ ನೆಪಗಳನ್ನು ಒಡ್ಡಿ ರೈತರ ಹೆಸರಿನಲ್ಲಿ ರಾಜಕೀಯ ಮಾಡುವುದು ಪ್ರತಿಪಕ್ಷಗಳಿಗೆ ಶೋಭ ತರುವಂತಹದ್ದಲ್ಲ ಎಂದು ಕಿಡಿಕಾರಿದರು.
ಸಂಬಂಧಿತ ಮಾಹಿತಿ ಹುಡುಕಿ