ಕರ್ನಾಟಕದಲ್ಲಿರುವ ಪ್ರತಿಯೊಂದು ಜಿಲ್ಲೆಗಳಲ್ಲಿರುವ ಪ್ರವಾಸೋದ್ಯಮ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಕನಿಷ್ಠ 20 ಕೋಟಿ ರೂ.ಗಳ ಅನುದಾನ ನೀಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ಪ್ರವಾಸೋದ್ಯಮ ಇಲಾಖೆಗೆ ಬಜೆಟ್‌ನಲ್ಲಿ ಹಣ ಕಡಿಮೆ ದೊರೆತ್ತಿದ್ದರೂ ಖಾಸಗಿ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಸ್ಥಳಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
ಗದಗದಲ್ಲಿ ಕೆಆರ್ಎಸ್ ಮಾದರಿಯ ಬೃಂದಾವನ, ಉಡುಪಿಯಲ್ಲಿ ಅನ್ನಬ್ರಹ್ಮ ಯೋಜನೆ, ಹಂಪಿ, ವಿಜಾಪುರ, ಪಟ್ಟದಕಲ್ಲು, ಐಹೊಳೆ, ಮೈಸೂರು ಭಾಗಗಳಲ್ಲಿ ಹೆಲಿ ಟೂರಿಸಂ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜನಾರ್ದನ ರೆಡ್ಡಿ ಪರಿಷತ್ತಿನಲ್ಲಿ ವಿವರಿಸಿದರು.