ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಚಿವರ ಬಂಗಲೆ ದುಂದು ವೆಚ್ಚಕ್ಕೆ ಕಡಿವಾಣ: ಯಡಿಯೂರಪ್ಪ (BJP | Yeddyurappa | Nanayya | JDS | Karnataka)
Bookmark and Share Feedback Print
 
ವಾಸ್ತು, ಜ್ಯೋತಿಷ್ಯದ ಹೆಸರಲ್ಲಿ ಸಚಿವರ ನಿವಾಸಗಳಿಗೆ ದುಂದು ವೆಚ್ಚ ಮಾಡಲಾಗುತ್ತಿದೆ. ಈ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಬೇಕು ಎಂದು ಜೆಡಿಎಸ್ ಹಿರಿಯ ನಾಯಕ ಎಂ.ಸಿ.ನಾಣಯ್ಯ ಅವರು ವಿಧಾನಪರಿಷತ್‌ನಲ್ಲಿ ಗುರುವಾರ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.

ಸರ್ಕಾರಿ ಬಂಗಲೆ ದುರಸ್ತಿ ನೆಪದಲ್ಲಿ ದೊಡ್ಡ ಅವ್ಯವಹಾರವೇ ನಡೆಯುತ್ತಿದೆ ಎಂದು ಪ್ರಶ್ನೋತ್ತರ ವೇಳೆಯಲ್ಲಿ ಇಂದು ವಿಧಾನಪರಿಷತ್‌ನಲ್ಲಿ ಪ್ರಸ್ತಾಪ ಮಾಡಿದ ಅವರು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಈ ಹಿನ್ನೆಲೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಪ್ರತಿಪಕ್ಷಗಳ ಕಾಳಜಿ, ಕಳವಳ ನನಗೆ ಅರ್ಥವಾಗುತ್ತಿದೆ. ಸರ್ಕಾರಿ ಬಂಗಲೆಗಳ ದುರಸ್ತಿಗಾಗಿ ವೆಚ್ಚ ಮಾಡುವ ಹಣಕ್ಕೆ ಕಡಿವಾಣ ಹಾಕಲಾಗುವುದು ಎಂದು ಹೇಳಿದರು.

ಬಂಗಲೆಗಳ ದುರಸ್ತಿಗೆ ದೊಡ್ಡ ಪ್ರಮಾಣದ ಹಣ ವೆಚ್ಚವಾಗುತ್ತಿದೆ. ಈ ಹಿಂದೆ ಎಸ್.ಎಂ.ಕೃಷ್ಣ, ಧರಂಸಿಂಗ್, ಎಚ್.ಡಿ.ಕುಮಾರಸ್ವಾಮಿ ಅವರ ಕಾಲದಲ್ಲೂ ಸರ್ಕಾರಿ ಬಂಗಲೆಗಳ ದುರಸ್ತಿಗೆ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದಾರೆ. ಸಚಿವರು ದುಂದು ವೆಚ್ಚ ಮಾಡದೇ ಆದರ್ಶವಾಗಿರಬೇಕು ಎಂಬುದೇ ನಮ್ಮ ಉದ್ದೇಶ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ