ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶಾಸಕಾದವರಿಗೆಲ್ಲ ಸಚಿವಗಿರಿ ಸಾಧ್ಯವಿಲ್ಲ: ಯಡಿಯೂರಪ್ಪ (BJP | Yeddyurappa | Atal | Karnataka | Janardana Reddy)
Bookmark and Share Feedback Print
 
ಶಾಸಕರಾಗಿ ಗೆದ್ದವರನ್ನೆಲ್ಲಾ ಸಚಿವರನ್ನಾಗಿ ಮಾಡಲು ಸಾಧ್ಯವಿಲ್ಲ. ನಮ್ಮ ಇತಿ ಮಿತಿಯಲ್ಲಿ, ಯಾರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬುದನ್ನು ಪರಿಗಣಿಸಿ ಅಂಥವರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷದೊಳಗೆ ಅಸಮಾಧಾನವ್ಯಕ್ತಪಡಿಸುತ್ತಿರುವ ಭಿನ್ನರಿಗೆ ತಿರುಗೇಟು ನೀಡಿದ್ದಾರೆ.

ಪಕ್ಷದ ಹಿರಿಯ ಮುತ್ಸದ್ಧಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಲು ಇಲ್ಲಿಗೆ ಆಗಮಿಸಿರುವ ಯಡಿಯೂರಪ್ಪ ಈ ವಿಷಯ ತಿಳಿಸಿದರು.

ರಾಜ್ಯ ಸಚಿವ ಸಂಪುಟದ ಪುನಾರಚನೆ ಸದ್ಯಕ್ಕಿಲ್ಲ ಎಂದು ಅವರು ಮತ್ತೆ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸರ್ಕಾರಕ್ಕೆ 2ವರ್ಷ ಪೂರ್ಣಗೊಂಡ ನಂತರ ಈ ಕುರಿತು ಯೋಜನೆ ಮಾಡ್ತೇನೆಂದು ಹೇಳಿದ ಅವರು ಎರಡು ವರ್ಷಗಳು ಪೂರೈಸಿದ ನಂತರ ಸಂಪುಟ ವಿಸ್ತರಿಸಿದಾಗ ಯುವ ಶಾಸಕರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತದೆ. ಈ ಬಗ್ಗೆ ತಲೆಕೆಡಿಸಿಕೊಳ್ಳದೆ ಮುಂದಿನ ಬಜೆಟ್ ಸಿದ್ದತೆ ಬಗ್ಗೆ ಗಮನ ಹರಿಸಲಾಗುವುದು ಎಂದರು.
ಸಂಬಂಧಿತ ಮಾಹಿತಿ ಹುಡುಕಿ