ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭಿನ್ನರ ಬಹಿರಂಗ ಹೇಳಿಕೆಗೆ ಕಡಿವಾಣ ಹಾಕ್ತೇವೆ: ಸದಾನಂದಗೌಡ (BJP | Congress | Yeddyurappa | Udupi | Renukacharya)
Bookmark and Share Feedback Print
 
NRB
ಪಕ್ಷದ ಚೌಕಟ್ಟನ್ನು ಮೀರಿ ಕೆಲವು ಶಾಸಕರು ಬಹಿರಂಗ ಹೇಳಿಕೆ ನೀಡುತ್ತಿರುವ ಬಗ್ಗೆ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ, ಬಹಿರಂಗ ಹೇಳಿಕೆಗೆ ಶೀಘ್ರದಲ್ಲೇ ಕಡಿವಾಣ ಹಾಕಲಾಗುತ್ತದೆ ಎಂದು ಭಿನ್ನರಿಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಉಡುಪಿಯಲ್ಲಿ ಶನಿವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದೊಳಗೆ ಭಿನ್ನಮತ ಸ್ಫೋಟಿಸಿ, ತಾವು ಅಧಿಕಾರದ ಗದ್ದುಗೆ ಹಿಡಿಯುತ್ತೇವೆ ಎಂಬ ನಿರೀಕ್ಷೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಬೇಡ ಎಂದರು. ಆಡಳಿತಾರೂಢ ಬಿಜೆಪಿ ಸರ್ಕಾರ ಸುಭದ್ರವಾಗಿದೆ ಎಂದರು.

ಪಕ್ಷದೊಳಗೆ ಭಿನ್ನಮತವೇ ಇಲ್ಲ ಅಂತ ನಾನು ಹೇಳಲಾರೆ. ಕೆಲವು ಪಕ್ಷದ ಚೌಕಟ್ಟನ್ನು ಮೀರಿ ವರ್ತಿಸುತ್ತಿರುವುದನ್ನು ನಾವು ಗಮನಿಸುತ್ತಿದ್ದೇವೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಅಧಿವೇಶನ ಮುಗಿದ ಬಳಿಕ ಬಹಿರಂಗ ಹೇಳಿಕೆ ನೀಡುತ್ತಿರುವ ಬಗ್ಗೆ ಶೀಘ್ರದಲ್ಲೇ ಕಡಿವಾಣ ಹಾಕಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ